ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ (ಕುವೆಂಪು ರಸ್ತೆ) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಜನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 21 ರಂದು ಬೆಳಗ್ಗೆ 10ರಿಂದದ ಸಂಜೆ 6ರ ವರಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ನಗರ ಉಪ ವಿಭಾಗ 1ರ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.