ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪಶು ಸಂಗೋಪನೆ ಸಚಿವರು ಹಾಗೂ ಬೀದರ್ ಜಿಲ್ಲೆ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್ ಅವರು ಜುಲೈ 15 ಮತ್ತು 16 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
https://www.suddikanaja.com/2021/02/05/wild-elephant-combing-at-umblebailu-end-today/
ಜುಲೈ 15ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 7.30ಕ್ಕೆ ಶಿವಮೊಗ್ಗ ತಲುಪಿ ಶಿವಮೊಗ್ಗ ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಮಾಡುವರು.
ಜುಲೈ 16ರಂದು ಬೆಳಗ್ಗೆ 7 ಗಂಟೆಗೆ ಶಿವಮೊಗ್ಗದಿಂದ ಹೊರಟು 8 ಗಂಟೆಗೆ ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ ಮಠಕ್ಕೆ ತೆರಳುವರು. ಬೆಳಗ್ಗೆ 8 ರಿಂದ 9.30ರ ವರೆಗೆ ಗೋಶಾಲೆ ಭೇಟಿ ಮಾಡುವರು. ಬೆಳಗ್ಗೆ 11 ರಿಂದ ಮಧ್ಯಾಹ್ನ 12.30ರ ವರೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ, 24/7 ಪ್ರಾಣಿ ಕಲ್ಯಾಣ ಸಹಾಯವಾಣಿ (ವಾರ್ ರೂಂ) ಕಾರ್ಯವೈಖರಿ ಬಗ್ಗೆ ಚರ್ಚೆ ಹಾಗೂ ಜಿಲ್ಲೆಯ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.30 ರವರೆಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ಹಾಗೂ ಪಕ್ಷದ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4.30ಕ್ಕೆ ಶಿವಮೊಗ್ಗದಿಂದ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಎಂ.ಜಯಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://www.suddikanaja.com/2021/01/18/ks-eshwarappa-allegation-of-illegality-in-niranthara-jyothi-yojane/