ಸೋಮವಾರದಿಂದ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ, ಮಾಲ್, ದೇವಸ್ಥಾನ ತೆರೆಯಲು ಅವಕಾಶ, ನೈಟ್ ಕರ್ಫ್ಯೂ ಇರಲ್ಲ, ಏನೇನು ನಿಯಮ ಅನ್ವಯ, ಇಲ್ಲಿದೆ ಮಾಹಿತಿ

 

 

ಸುದ್ದಿ ಕಣಜ.ಕಾಂ
ಬೆಂಗಳೂರು: ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜುಲೈ 5ರ ಬೆಳಗ್ಗೆ 5 ಗಂಟೆಯಿಂದ 19ರ ಬೆಳಗ್ಗೆ 5ರ ವರೆಗೆ ಜಾರಿಗೆ ಬರುವಂತೆ ನಿಯಮಗಳಲ್ಲಿ ಕೆಲವೊಂದು ಸಡಿಲಿಕೆಗಳನ್ನು ನೀಡಿ ನಿರ್ಬಂಧ ವಿಧಿಸಲಾಗಿದೆ.

https://www.suddikanaja.com/2021/04/23/shivamogga-is-ready-for-weekend-curfew/

ಸರ್ಕಾರಿ, ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಡೆಸಿದ ಮಾಧ್ಯಮಗೋಷ್ಠಿಯ ವಿವರ ಇಲ್ಲಿದೆ.

  1. ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
  2. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ.
  3. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಗ್ರೀನ್ ಸಿಗ್ನಲ್
  4. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಬಹುದು.
  5. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
  6. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ
  7. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
  8. ಕೊರೋನಾ ಕರ್ಫ್ಯೂ(ನೈರ್ಟ್ ಕರ್ಫ್ಯೂ) ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  9. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
  10. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
  11. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
  12. ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ
  13. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
  14. ಜಿಲ್ಲೆಯಲ್ಲಿರುವ ಪರಿಸ್ಥಿತಿಗೆ ಅನುಗುಣವಾಗಿ ಆಯಾ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸೂಚನೆ ನೀಡಿದೆ.

https://www.suddikanaja.com/2020/12/24/state-government-withdrew-the-night-curfew/

error: Content is protected !!