ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಭವಿಷ್ಯವೊಂದನ್ನು ನುಡಿದಿದ್ದಾರೆ.
https://www.suddikanaja.com/2020/12/17/ediga-community-demand-for-separate-development-corporation/
2023ರಲ್ಲಿ ಆರ್ಯ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ. ನಾನು ಆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತೇನೆ ಎಂದು ನಗರದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಈಡಿಗ ಸಮಾಜ ರಾಜ್ಯದಲ್ಲಿ ಹಿಂದುಳಿದಿದೆ. ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಪ್ರಾತಿನಿಧ್ಯದ ಅವಶ್ಯಕತೆ ಇದೆ. ಇದೆಲ್ಲವನ್ನು ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದರೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಹೇಮಗುಡ್ಡದಲ್ಲಿ ಚಿಂತನಾ ಮಂಥನ ಸಭೆ | ಸಮುದಾಯಕ್ಕಾದ ಅನ್ಯಾಯ ಸರಿಪಡಿಸುವ ನಿಟ್ಟಿನಲ್ಲಿ ಜುಲೈ 25ರಂದು ಗಂಗಾವತಿಯ ಹೇಮಗುಡ್ಡದಲ್ಲಿ ಚಿಂತನಾ ಮಂಥನ ಸಭೆ ಕರೆಯಲಾಗಿದೆ. ಈ ಸಭೆಗೆ ರಾಜ್ಯ ಎಲ್ಲ ಜಿಲ್ಲೆಗಳಿಂದ ಸಮಾಜದ ಮುಖಂಡರು ಆಗಮಿಸಲಿದ್ದಾರೆ ಎಂದು ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂಗಾರಪ್ಪ ಅವರ ಹೆಸರು ಇಡಬೇಕು. ಆರ್ಯ ಈಡಿಗ ನಿಗಮ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಹುಲ್ತಿಕೊಪ್ಪ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಎಸ್.ಸಿ. ರಾಮಚಂದ್ರ, ಮಹಿಳಾ ಸಂಘದ ಅಧ್ಯಕ್ಷೆ ಗೀತಾಂಜಲಿ ದತ್ತಾತ್ರೇಯ, ಪ್ರಮುಖರಾದ ವೀಣಾ, ಜಿ.ಡಿ.ಮಂಜುನಾಥ್, ಕೆ.ವೈ. ರಾಮಚಂದ್ರಪ್ಪ, ಸುಧಾಕರ್ ಉಪಸ್ಥಿತರಿದ್ದರು.
https://www.suddikanaja.com/2021/01/10/ediga-community-program-in-shivamogga/