ಸುದ್ದಿ ಕಣಜ.ಕಾಂ
ಸಾಗರ: ಕುಟುಂಬ ಸಹಿತ ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಬರುವ ಹೊತ್ತಿಗೆ ಮನೆಯಲ್ಲಿನ ಚಿನ್ನಾಭರಣ, ನಗದು ಕಳವು ಮಾಡಿದ ಘಟನೆ ಪಟ್ಟಣದ ಸೊರಬ ರಸ್ತೆಯಲ್ಲಿನ ಜೆ.ಪಿ.ನಗರದಲ್ಲಿ ಇತ್ತೀಚೆಗೆ ನಡೆದಿದೆ.
ಆಶ್ರಯ ಬಡಾವಣೆಯ ಶಿವಕುಮಾರ್ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಜುಲೈ 24ರಂದು ದೇವಸ್ಥಾನಕ್ಕೆ ಹೋಗಿದ್ದು 27ರಂದು ವಾಪಸ್ ಮನೆಗೆ ಬಂದಿದ್ದು, ನೋಡಿದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ. ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ ನಗದು, 60 ಸಾವಿರ ರೂಪಾಯಿ ನಗದು ಕಳ್ಳತನ ಮಾಡಲಾಗಿದೆ. ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.