ಸುದ್ದಿ ಕಣಜ.ಕಾಂ
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಿಂದ ಆಯನೂರು ಕಡೆಗೆ ಬರುವ ರಸ್ತೆಯಲ್ಲಿ ಹೊರಬೈಲು ಹತ್ತಿರ ಬೈಕ್ ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ.
ಬೂದಿಗೆರೆ ನಿವಾಸಿಗಳಾದ ಪ್ರಭು(22), ರಮೇಶ್ (25) ಎಂಬುವವರು ಮೃತಪಟ್ಟಿದ್ದಾರೆ.
READ | ಮಗುವಿಗೆ ಜನ್ಮ ನೀಡಿ ನ್ಯುಮೋನಿಯಾದಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆ
ಬೈಕ್ ಚಾಲನೆ ಮಾಡುತ್ತಿದ್ದ ಪ್ರಭು ಅತಿ ವೇಗದಿಂದ ಬಂದಿದ್ದು, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ್ದರು.
ಪ್ರಭು ಹಾಗೂ ಹಿಂಬದಿ ಕುಳಿತ್ತಿದ್ದ ರಮೇಶ್ ಇಬ್ಬರಿಗೂ ತೀವ್ರ ಸ್ವರೂಪದ ಪೆಟ್ಟಾಗಿ ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.
ಬೂದಿಗೆರೆಯ ಶಿವರಾಂ ಎಂಬುವವರು ನೀಡಿದ ದೂರಿನನ್ವಯ ಮಾಳೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 279, 304(ಎ) ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗುತ್ತಿದೆ.