ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದಲ್ಲಿ ಹೊಸದಾಗಿ ಪೆÇಲೀಸ್ ಅಧೀಕ್ಷಕರ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಜಮೀನು ಗುರುತಿಸಿ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ನಿರ್ಮಾಣ ಆರಂಭಿಸಲು ಸೂಚನೆ
ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಕಾಮಗಾರಿ ತಕ್ಷಣ ಪ್ರಾರಂಭಿಸಬೇಕು. ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಪ್ರಗತಿಯಲ್ಲಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಸರ್ಕಾರದ ಹಂತದಲ್ಲಿರುವ ವಿವಿಧ ಯೋಜನೆಗಳ ಪ್ರಸ್ತಾವನೆಗಳಿಗೆ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
READ | ಶಾರ್ಟ್ ಸರ್ಕ್ಯೂಟ್ನಿಂದಾಗಿ ಸುಟ್ಟು ಕರಕಲಾದ ಲಕ್ಷಾಂತರ ಮೌಲ್ಯದ ಶುಂಠಿ, ನಾಟಾ, ಭತ್ತ
ತೆವರೆಚಟ್ನಳ್ಳಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯ
ತೆವರಚಟ್ನಳ್ಳಿ ಗ್ರಾಮದಲ್ಲಿ 9 ಎಕರೆ ಪ್ರದೇಶದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಕುರಿತು ಪರಿಷ್ಕøತ ಪ್ರಸ್ತಾವನೆ ಸಲ್ಲಿಸಲಾಗಿದೆ. ಸೋಮಿನಕೊಪ್ಪದಲ್ಲಿ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಹೆಸರಿನಲ್ಲಿರುವ 20 ಎಕರೆ ಪ್ರದೇಶದಲ್ಲಿ ಖೇಲೋ ಇಂಡಿಯಾ ಯೋಜನೆ ಅಡಿ ಜಿಲ್ಲಾ ಕ್ರೀಡಾ ಸಂಕೀರ್ಣ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನವುಲೆ ಗ್ರಾಮದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆ ಕುರಿತು ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಪುನಹ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗಾಧಿಕಾರಿ ಟಿ.ವಿ. ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ನೀರು ಪೋಲು ತಡೆಗೆ ಡ್ರಿಪ್ ವ್ಯವಸ್ಥೆ, ಮುಖ್ಯಮಂತ್ರಿಗೆ 400 ಕೋಟಿ ರೂ. ಪ್ರಸ್ತಾವನೆ