ಸುದ್ದಿ ಕಣಜ.ಕಾಂ | SHIVAMOGGA | HEALTH | COVID 3rd WAVE
ಶಿವಮೊಗ್ಗ: ಕೊರೊನಾ ಮೂರನೇ ಅಲೆ ಸೋಂಕು ತಡೆ, ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.
ಕೊರೊನಾ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಪ್ರದತ್ತವಾದ ಅಧಿಕಾರದಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆಗಸ್ಟ್ 5 ರಿಂದ 15ರ ವರೆಗೆ ಜಿಲ್ಲೆಯಾದ್ಯಂತ ನಿಯಮಗಳನ್ನು ಹೇರಿದ್ದಾರೆ.
https://www.suddikanaja.com/2021/08/01/covid-third-wave-cm-instruct-to-open-check-post-at-thirthahalli/
ಮಾರ್ಗಸೂಚಿಯಲ್ಲಿ ಏನೇನಿದೆ?
- ಕೋವಿಡ್ 19 ನಿಯಂತ್ರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳು ಮತ್ತು ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯ.
- ಅಂತರ್ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಬಸ್ ಅಥವಾ ವೈಯಕ್ತಿಕ ಸಾರಿಗೆ ಮೂಲಕ ಪ್ರವೇಶ ಪಡೆಯುವವರಿಗೆ ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದರೂ 72 ಗಂಟೆಗಳ ಒಳಗೆ ಮಾಡಿಸಿದ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ನೆಗೆಟಿವ್ ಪ್ರಮಾಣ ಪತ್ರ ಹೊಂದಿರಲೇಬೇಕು.
- ಜಿಲ್ಲಾ ವ್ಯಾಪ್ತಿಯ ಎಲ್ಲ ಲಾಡ್ಜ್, ಹೋಟೆಲ್, ಹೋಮ್ ಸ್ಟೇ, ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಪ್ರವಾಸಿಗರು ಚೆಕ್ ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಹೊಂದಿರಬೇಕು.
- ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ್ ಜಲಪಾತ, ಆಗುಂಬೆಯ ಸೂರ್ಯಾಸ್ತ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು, ಸಾರ್ವಜನಿಕರು ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್.ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು.
- ಮದುವೆ ಸಮಾರಂಭಗಳಲ್ಲಿ ಕೇವಲ 50 ಜನರಿಗೆ ಮಾತ್ರ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಭಾಗವಹಿಸಲು ಅನುಮತಿಸಲಾಗಿದೆ.
ಈ ಮೇಲಿನ ಆದೇಶಗಳನ್ನು ಜಿಲ್ಲಾಧಿಕಾರಿಗಳು ನೀಡಿದ್ದಾರೆ. ಈ ನಿಯಮಗಳನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮತ್ತು ಇತರೆ ಸಕ್ಷಮ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
https://www.suddikanaja.com/2021/05/17/covid-3rd-wave/