ಸುದ್ದಿ ಕಣಜ.ಕಾಂ | SHIVAMOGGA | HEALTH
ಶಿವಮೊಗ್ಗ: ಕ್ಯಾಥ್ ಲ್ಯಾಬ್ನಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ ಹೇಳಿದರು.
ನಗರದ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶನಿವಾರ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಕರ್ನಾಟಕ ಕಾರ್ಡುದಾರರಿಗೆ ಹಾಗೂ ಇನ್ನುಳಿದ ಸಾರ್ವಜನಿಕರಿಗೂ ರಿಯಾಯಿತಿ ದರದಲ್ಲಿ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ಲಭ್ಯವಿದೆ ಎಂದು ಹೇಳಿದರು.
https://www.suddikanaja.com/2021/08/03/evening-college-admission-available-in-shivamogga/
ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ, ಸ್ಟಂಟ್ ಅಳವಡಿಕೆ ಚಿಕಿತ್ಸೆ
ಜಯದೇವ ಹೃದ್ರೊಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಮಾತನಾಡಿ, ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊಂಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್ ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ. ಕ್ಯಾಥ್ ಲ್ಯಾಬ್ ನಲ್ಲಿ ಶನಿವಾರ ಬೆಳಗ್ಗೆ ಐದು ಮಂದಿಗೆ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಮತ್ತು ಸ್ಟಂಟ್ ಅಳವಡಿಕೆ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದರು.
ಹೃದ್ರೋಗ ಚಿಕಿತ್ಸೆಗೆ ಮಾಸ್ಟರ್ ಕಾರ್ಡ್ ಸೌಲಭ್ಯ ಲಭ್ಯ
ಇತ್ತೀಚಿನ ದಿನಗಳಲ್ಲಿ 25ರಿಂದ 35 ವರ್ಷದೊಳಗಿನವರಲ್ಲಿ ಹೃದ್ರೋಗ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಇಲ್ಲಿನ ಕ್ಯಾಥ್ ಲ್ಯಾಬ್ ನಲ್ಲಿ ಹೃದಯಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಹೆಲ್ತ್ ತಪಾಸಣೆ ಸೌಲಭ್ಯ ಸಹ ಲಭ್ಯವಿದೆ.
ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ವೈಸ್ ಚಾನ್ಸಲರ್ ಡಾ.ರವೀಂದ್ರನಾಥ್, ಶಿವಮೊಗ ಮೆಡಿಕಲ್ ಕಾಲೇಜಿನ ಹೃದ್ರೋಗ ತಜ್ಞರಾದ ಡಾ. ವಿರೂಪಾಕ್ಷಪ್ಪ, ಡಾ. ಪರಮೇಶ್ವರಪ್ಪ, ಡಾ.ಮಹೇಶ್, ಡಾ.ಶ್ರಿಧರ್, ಆಡಳಿತಾಧಿಕಾರಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
https://www.suddikanaja.com/2021/07/29/shikshaka-mitra-app-using-mandotory-from-august-2/