ಸುದ್ದಿ ಕಣಜ.ಕಾಂ | KARNATAKA | POLITICS
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡಲಾಗುವ ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.
ನಿಕಟಪೂರ್ವ ಮುಖ್ಯಮಂತ್ರಿಯಾದ ಯಡಿಯೂರಪ್ಪ ಅವರಿಗೆ ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳ ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ್ ಶಂಕ್ರಪ್ಪ ಸೂಳಿಕೇರಿ ಆದೇಶದಲ್ಲಿ ತಿಳಿಸಿದ್ದಾರೆ.