ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ತಾಲೂಕು ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ `ಪೇಪರ್ ಬ್ಯಾಗ್, ಎನ್ವಲಪ್ ಮತ್ತು ಫೈಲ್ ತಯಾರಿಕೆ’ 10 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.
https://www.suddikanaja.com/2020/11/05/mogaveera-security/
ಅರ್ಜಿ ಸಲ್ಲಿಸುವುದಕ್ಕಾಗಿ ಇರಬೇಕಾದ ಅರ್ಹತೆಗಳೇನು?
ಆಸಕ್ತರು ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ 45 ವರ್ಷದೊಳಗಿನವರಾಗಿಬೇಕು. 7ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಸೆಪ್ಟೆಂಬರ್ 13ರಿಂದ ಆರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂಬರ್, ವಿದ್ಯಾರ್ಹತೆ ಮತ್ತು ವಯಸ್ಸಿನ ವಿವರಗಳೊಂದಿಗೆ, ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 ಶಿವಮೊಗ್ಗ ತಾಲ್ಲೂಕು ಇಲ್ಲಿಗೆ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9481955721, 9743429595, 9449371579 ಅಥವಾ cbrsetiholalur@gmail.com ಸಂಪರ್ಕಿಸುವಂತೆ ತಿಳಿಸಲಾಗಿದೆ.
https://www.suddikanaja.com/2021/01/03/skill-job-training-for-unemployed/