ಸುದ್ದಿ ಕಣಜ.ಕಾಂ | DISTRICT | PDS
ಶಿವಮೊಗ್ಗ: ಪಡಿತರ ಚೀಟಿಯಲ್ಲಿರುವ ಎಲ್ಲ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು ಸೆಪ್ಟೆಂಬರ್ 1 ರಿಂದ 10ರ ವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರು, ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.
ಮುಂಚೆಯೂ ಇ-ಕೆವೈಸಿಗೆ ಗಡುವು ನೀಡಲಾಗಿತ್ತು. ಈಗ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.