ಸುದ್ದಿ ಕಣಜ.ಕಾಂ | CITY | CRIME
ಶಿವಮೊಗ್ಗ: ರಾಜ್ಯ, ರಾಷ್ಟ್ರಮಟ್ಟದಲ್ಲಿ 10ಕ್ಕೂ ಹೆಚ್ಚು ಸಲ ಪ್ರತಿನಿಧಿಸಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಆಟಗಾರರೊಬ್ಬರು ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಶೋಕ ನಗರದ ನಿವಾಸಿ ನವೀನ್ (31) ಎಂಬುವವರೇ ಮೃತಪಟ್ಟ ದುರ್ದೈವಿ. ನಗರದ ದ್ರೌಪದಮ್ಮ ವೃತ್ತದಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ನವೀನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಂದು ಬೈಕ್ ನಲ್ಲಿದ್ದ ನವೀನ್ (32) ಎಂಬುವವರಿಗೆ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಸ್ಪರ ಎರಡೂ ಬೈಕ್ ಗಳು ರಭಸವಾಗಿ ಡಿಕ್ಕಿ ಹೊಡೆದುಕೊಂಡಿವೆ.