ಸುದ್ದಿ ಕಣಜ.ಕಾಂ | DISTRICT | TALENT
ಶಿವಮೊಗ್ಗ: ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು 2021-22 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
https://www.suddikanaja.com/2020/11/07/new-born-baby/
ನಾವೀನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10,000 ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
ಅರ್ಜಿಗಳನ್ನು ಇಲ್ಲಿಂದ ಪಡೆಯಿರಿ
ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸೆಪ್ಟೆಂಬರ್ 13ರೊಳಗೆ ಮೇಲ್ಕಂಡ ಕಚೇರಿಗೆ ಸಲ್ಲಿಸಬೇಕು.
ಈ ದಾಖಲೆಗಳನ್ನು ಲಗತ್ತಿಸಿ
ಅರ್ಜಿಯೊಂದಿಗೆ ಮಗುವಿನ ಭಾವಚಿತ್ರ, ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರ, ಪ್ರತಿಭೆಯನ್ನು ಹೊಂದಿರುವ ಬಗ್ಗೆ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಪತ್ರಿಕಾ ಪ್ರಕಟಣೆಯ ತುಣುಕು, ಪ್ರಮಾಣ ಪತ್ರಗಳು, ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಭಾಗವಹಿಸಿರುವ, ಪ್ರಶಸ್ತಿ ಪಡೆದಿರುವ ಮಾಹಿತಿ, ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://www.suddikanaja.com/2021/02/25/nann-mescom-app-developed-for-consumers/