ಸುದ್ದಿ ಕಣಜ.ಕಾಂ | TALUK | POLITICS
ಶಿವಮೊಗ್ಗ: ಭದ್ರಾವತಿ ನಗರ ಸಭೆಯ ವಾರ್ಡ್ ಸಂಖ್ಯೆ 29ರ ಚುನಾವಣೆಯ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಕಟಿಸಿ ಆದೇಶಿಸಿದ್ದಾರೆ.
1977 ಕರ್ನಾಟಕ ಮುನ್ಸಿಪಾಲಿಟಿಗಳ ಕೌನ್ಸಿಲರ್ ಗಳ(ಚುನಾವಣೆ) ನಿಯಮಗಳ ಎಂಟನೇ ನಿಯಮದ ಅನುಸಾರವಾಗಿ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಚುನಾವಣೆ ವೇಳಾಪಟ್ಟಿ
ಆಗಸ್ಟ್ 23ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. 24ರಂದು ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ.
26ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಸೆಪ್ಟೆಂಬರ್ 3ರಂದು ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನಾಂಕವಾಗಿರುತ್ತದೆ.
READ | ಅಡಿಕೆ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಅರೆಸ್ಟ್, ವಶಕ್ಕೆ ಪಡೆದ ಗಾಂಜಾ ಎಷ್ಟು ಗೊತ್ತಾ?
ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ 5ರಂದು ಮರು ಮತದಾನ ಅವಶ್ಯವಿದ್ದರೆ ನಡೆಸಲಾಗುವುದು.
ಸೆ.6ರಂದು ಬೆಳಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ನಡೆಯಲಿದೆ.
6ರಂದು ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.