ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ವಿಮಾನ ನಿಲ್ದಾಣದಲ್ಲಿ ಏನೇನು ಕಾಮಗಾರಿ?
ವಿಮಾನ ನಿಲ್ದಾಣದ ಎಟಿಸಿ ಟವರ್ ನೋಂದಣಿ ಸೇರಿದಂತೆ ಅಗತ್ಯ ಪ್ರಕ್ರಿಯೆಗಳನ್ನು ಆದಷ್ಟು ಬೇಗನೆ ಮುಗಿಸಬೇಕು. ಬಾಕಿ ಉಳಿದಿರುವ ಕಾಂಪೌಂಡ್ ಕೆಲಸ ಹಾಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗಳನ್ನು ಆದಷ್ಟು ಬೇಗನೆ ಪ್ರಾರಂಭಿಸಬೇಕು ಎಂದು ಸೂಚನೆ ನೀಡಿದರು.
ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ 38 ಎಕರೆ ಜಮೀನಿನಲ್ಲಿ ವಸತಿಗಾಗಿ ಲೇಔಟ್ ನಿರ್ಮಿಸಿ, ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತಾದ ಪ್ರಸ್ತಾವನೆಯನ್ನು ಕಂದಾಯ ಇಲಾಖೆ ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮಕ್ಕೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
READ | ಶಾರ್ಟ್ ಸರ್ಕ್ಯೂಟ್ನಿಂದಾಗಿ ಸುಟ್ಟು ಕರಕಲಾದ ಲಕ್ಷಾಂತರ ಮೌಲ್ಯದ ಶುಂಠಿ, ನಾಟಾ, ಭತ್ತ
ಸಿಗಂದೂರು ಬಳಿ ಮೈನಿಂಗ್, ವರದಿ ಸಲ್ಲಿಕೆಗೆ ನಿರ್ದೇಶನ
ಸಿಗಂದೂರು ಸೇತುವೆ ನಿರ್ಮಾಣ ನಿಗದಿಯಂತೆ ನಡೆಯುತ್ತಿದೆ. ಕಾಮಗಾರಿಗೆ ಸ್ಥಳೀಯವಾಗಿ ಮೈನಿಂಗ್ ಅನುಮತಿ ನೀಡಲಾಗಿದ್ದು, ಅನಿಯಂತ್ರಿತ ಬ್ಲಾಸ್ಟಿಂಗ್ ಕುರಿತು ಸ್ಥಳೀಯರಿಂದ ದೂರುಗಳು ದಾಖಲಾಗಿವೆ. ಈ ಕುರಿತು ಉಪ ವಿಭಾಗಾಧಿಕಾರಿಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗಾಧಿಕಾರಿ ಟಿ.ವಿ. ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/07/24/air-bus-facility-in-shivamogga-airport-said-bs-yadiyurappa/