ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಶಿವಮೊಗ್ಗದಲ್ಲಿ ತಿದ್ದುಪಡಿ ಮಾರ್ಗಸೂಚಿ ಪ್ರಕಟ, ಡಿಸಿ ಆದೇಶದಲ್ಲಿ‌ ಏನಿದೆ?

 

 

ಸುದ್ದಿ ಕಣಜ.ಕಾಂ | DISTRICT | HEALTH
ಶಿವಮೊಗ್ಗ: ನೆರೆ ಹೊರೆ ರಾಜ್ಯಗಳಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ, ಜಿಲ್ಲಾಧಿಕಾರಿ ಕೆ.ಬಿ.ಶಿಚಕುಮಾರ್ ಅವರು ತಿದ್ದುಪಡಿ ಆದೇಶವನ್ನು ಹೊರಡಿಸಿದ್ದಾರೆ.

https://www.suddikanaja.com/2020/11/30/grama-panchayat-election-date-declare-in-karnataka/

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಿ ಆದೇಶಿಸಲಾಗಿದೆ.
ಎಲ್ಲೆಲ್ಲಿ ಆರ್.ಟಿ.ಪಿ.ಸಿ.ಆರ್. ವರದಿ, ಸರ್ಟಿಫಿಕೇಟ್ ಕಡ್ಡಾಯ?
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ ಜಲಪಾತ, ಆಗುಂಬೆಯ ಸೂರ್ಯಾಸ್ತ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ ಡ್ಯಾಂ, ಹುಲಿ ಮತ್ತು ಸಿಂಹ ಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಹೊಂದಿರಬೇಕು.

ತಿದ್ದುಪಡಿ ಮಾರ್ಗಸೂಚಿಯಲ್ಲಿ ಏನಿದೆ?

  • ಜಿಲ್ಲಾ ವ್ಯಾಪ್ತಿಯ ಎಲ್ಲ ಲಾಡ್ಜ್, ಹೋಟೆಲ್, ಹೋಂ ಸ್ಟೇ, ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‌.ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
  • ಕೋವಿಡ್ ಎರಡನೇ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು

https://www.suddikanaja.com/2021/05/26/cm-yadiyurappa-instruction-to-thirthahalli/

error: Content is protected !!