ಸೇತುವೆ, ರಸ್ತೆ ಕುಸಿತ, ಶಿವಮೊಗ್ಗ, ಉಡುಪಿ, ಕುಂದಾಪುರ, ಮಂಗಳೂರು ಸಂಪರ್ಕ ಕಡಿತ, ಪರ್ಯಾಯ ಮಾರ್ಗದ ವ್ಯವಸ್ಥೆ

 

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಹಾಗೂ ಎನ್.ಎಚ್. 169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ಕ್ರಾಸ್ ವರೆಗೆ ರಸ್ತೆ ಕುಸಿದಿದೆ. ಹೀಗಾಗಿ, ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಎನ್.ಎಚ್.766(ಸಿ)ರಲ್ಲಿ ಬರುವ ಸೇತುವೆ ಕುಸಿದಿರುವುದರಿಂದ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಿದೆ.

https://www.suddikanaja.com/2021/01/09/new-ksrtc-bus-service-from-mangalore-to-mantralaya/

ಆದೇಶದಲ್ಲಿ ಜಿಲ್ಲಾಧಿಕಾರಿಗಳು ಹೇಳಿದ್ದೇನು?
ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221(ಎ)(2) ಮತ್ತು (5) ಅನ್ವಯ ರಾಷ್ಟ್ರೀಯ ಹೆದ್ದಾರಿ 169 ಮತ್ತು 766ಸಿ ಮೂಲಕ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸುವುದು ಅಗತ್ಯವೆಂದು ಮನಗಂಡು ಸೇತುವೆ ಮತ್ತು ರಸ್ತೆ ದುರಸ್ತಿ ಆಗುವವರೆಗೆ ಭಾರೀ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಪರ್ಯಾಯ ಮಾರ್ಗದ ಬಗ್ಗೆ ಮಾಹಿತಿ
  1. ಶಿವಮೊಗ್ಗ ಮಾರ್ಗದಿಂದ ಕುಂದಾಪುರ ಮತ್ತು ಕುಂದಾಪುರದಿಂದ ಶಿವಮೊಗ್ಗಕ್ಕೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾದ ಶಿವಮೊಗ್ಗ-ಸಾಗರ-ಹೊನ್ನಾವರ (ಎನ್.ಎಚ್.69) ಮಾರ್ಗದಲ್ಲಿ ಸಂಚರಿಸತಕ್ಕದ್ದು.
  2. ಶಿವಮೊಗ್ಗದಿಂದ ಉಡುಪಿ-ಮಂಗಳೂರು ಮತ್ತು ಮಂಗಳೂರಿನಿಂದ ಉಡುಪಿ-ಶಿವಮೊಗ್ಗಕ್ಕೆ ಸಂಚರಿಸುವ ಭಾರಿ ವಾಹನಗಳು, ಶಿವಮೊಗ್ಗ-ಕೊಪ್ಪ-ಕಾರ್ಕಳ-ಮಂಗಳೂರು (ಎಸ್.ಎಚ್.57, 65, ಎನ್.ಎಚ್.169) ಮಾರ್ಗದಲ್ಲಿ ಸಂಚರಿಸಬಹುದು.
  3. ಶಿವಮೊಗ್ಗದಿಂದ ಕುಂದಾಪುರಕ್ಕೆ ಸಂಚರಿಸುವ ಭಾರಿ ವಾಹನಗಳು, ಶಿವಮೊಗ್ಗ-ಹೊಸನಗರ-ಹುಲಿಕಲ್ ಘಾಟ್- ಸಿದ್ದಾಪುರ- ಕುಂದಾಪುರ ಮಾರ್ಗದಲ್ಲಿ ಸಂಚರಿಸುವುದು.
  4. ಶಿವಮೊಗ್ಗದಿಂದ ಮಂಗಳೂರಿಗೆ ಸಂಚರಿಸುವ ಭಾರಿ ವಾಹನಗಳು, ಶಿವಮೊಗ್ಗ ನರಸಿಂಹರಾಜಪುರ- ಕೊಪ್ಪ- ಶೃಂಗೇರಿ- ಕಾರ್ಕಳ- ಮಂಗಳೂರು ಮಾರ್ಗದ ಮೂಲಕ ಸಂಚರಿಸುವಂತೆ ಆದೇಶಿಸಲಾಗಿದೆ.

https://www.suddikanaja.com/2020/12/19/road-transport-and-highways-minister-nitin-gadkari-inaugurated-689-crore-project-in-shivamogga/

error: Content is protected !!