ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ‘ಮಾಡೆಲ್ ಸಬ್ಡಿವಿಷನ್’ ಯೋಜನೆ ಅಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ಆಗಸ್ಟ್ 21ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಪವರ್ ಕಟ್ ಆಗಲಿದೆ?
ಆರ್.ಎಂ.ಆರ್ ರಸ್ತೆ, ದುರ್ಗಿಗುಡಿ ರಸ್ತೆ(ಸುರಭಿ ಹೋಟೆಲ್ ಸುತ್ತಮುತ್ತ), ಪಾರ್ಕ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.