ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಹಲವೆಡೆ ಎರಡು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಪವರ್ ಕಟ್ 1
ಪುರಲೆ ಫೀಡರ್ 3 ಮತ್ತು ಜಾವಳ್ಳಿ ಫೀಡರ್ 8 ರಲ್ಲಿ 11 ಕೆ.ವಿ. ಮಾರ್ಗ ಮುಕ್ತತೆ ನೀಡುವುದರಿಂದ ಗುರುಪುರ, ಪುರಲೆ, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 4 ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದೆ.
READ | ಶಾರ್ಟ್ ಸರ್ಕ್ಯೂಟ್ನಿಂದಾಗಿ ಸುಟ್ಟು ಕರಕಲಾದ ಲಕ್ಷಾಂತರ ಮೌಲ್ಯದ ಶುಂಠಿ, ನಾಟಾ, ಭತ್ತ
ಪವರ್ ಕಟ್ 2
ಮಲವಗೊಪ್ಪ ಫೀಡರ್ 5 ರಲ್ಲಿ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 5 ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದೆ.
ಪವರ್ ಕಟ್ 3
ಸಂತೇಕಡೂರು ವಿದ್ಯುತ್ ವಿತರಣೆ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಭಂಡಾರಿಕ್ಯಾಂಪ್, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿ ನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನ ಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಗಸ್ಟ್ 4 ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ.
https://www.suddikanaja.com/2021/07/29/shikshaka-mitra-app-using-mandotory-from-august-2/