ಕೆಪಿಟಿಸಿಎಲ್ ಸಿಬ್ಬಂದಿಯ ಮನೆಯಲ್ಲಿ ಚಿನ್ನಾಭರಣ, ನಗದು ಕಳವು

 

 

ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಕೆಪಿಟಿಸಿಎಲ್ ಲೆಕ್ಕಾಧಿಕಾರಿಯೊಬ್ಬರ ಮನೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಶನಿವಾರ ನಡೆದಿದೆ.
ಮಹಮ್ಮದ್ ರಫಿ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಇವರು ಕರ್ತವ್ಯದ ನಿಮಿತ್ತ ಬೆಂಗಳೂರಿಗೆ ಹೋಗಿದ್ದು ಪತ್ನಿ ತವರು ಮನೆಗೆ ಹೋಗಿದ್ದರು. ಆ ವೇಳೆ ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಏನೇನು ಕಳ್ಳತನ | 45 ಸಾವಿರ ರೂಪಾಯಿ ನಗದು, ಮಾಂಗಲ್ಯ ಸರ, ಮೂರು ಉಂಗುರ ಕಳವು ಮಾಡಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

error: Content is protected !!