ಮಧು ಬಂಗಾರಪ್ಪಗೆ ಕಾಂಗ್ರೆಸ್ ನಿಂದ‌ ಭವ್ಯ ಸ್ವಾಗತ ನಾಳೆ, ಫ್ಲೆಕ್ಸ್ ಗಳಿಂದ ಕಂಗೊಳಿಸುತ್ತಿದೆ‌ ಶಿವಮೊಗ್ಗ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿರುವ ಮಾಜಿ ಶಾಸಕ‌ ಮಧು ಬಂಗಾರಪ್ಪ ಅವರು ಆಗಸ್ಟ್ 4ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅವರನ್ನು ಭವ್ಯವಾಗಿ ಸ್ವಾಗತಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

https://www.suddikanaja.com/2021/03/03/madhu-bangarappa-support-farmer-protest/

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರಿದ್ದು, ಅವರನ್ನು ಆಗಸ್ಟ್ 4 ರಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ಭವ್ಯವಾಗಿ ಸ್ವಾಗತಿಸಲಾಗುವುದು ಎಂದು ತಿಳಿಸಿದರು.
ಮಧು ರಾಜ್ಯದಾದ್ಯಂತ ಗುರುತಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪ್ರೀತಿಯ ಪುತ್ರರಾಗಿದ್ದು, ಅವರಿಗೆ ಸಂಘಟನೆಯ ಶಕ್ತಿ ಇದೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ವಿಭಾಗೀಯ ಮಟ್ಟದ ಸಮಾವೇಶದಲ್ಲಿ ಕಾಂಗ್ರೆಸ್ ಸೇರಿದ್ದಾರೆ ಎಂದರು.

ವಿದ್ಯುಕ್ತವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಶಾಸಕರಾದ ಬಿ.ಕೆ. ಸಂಗಮೇಶ್, ಆರ್. ಪ್ರಸನ್ನ ಕುಮಾರ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಎಲ್. ರಾಮೇಗೌಡ, ಯಮುನಾ ರಂಗೇಗೌಡ, ಆರ್.ಸಿ. ನಾಯ್ಕ್, ರೇಖಾ ರಂಗನಾಥ್, ಸಿ.ಎಸ್. ಚಂದ್ರಭೂಪಾಲ್, ಎನ್.ಡಿ. ಪ್ರವೀಣ್ ಕುಮಾರ್, ಚಂದನ್, ಚಂದ್ರಶೇಖರ್ ಉಪಸ್ಥಿತರಿದ್ದರು.
ಮಧು ಸ್ವಾಗತಕ್ಕೆ ನಳನಳಿಸುತ್ತಿರುವ ಶಿವಮೊಗ್ಗ
ನಗರದ ಹಲವೆಡೆ ಫ್ಲೆಕ್ಸ್ ಹಾಕಿಸಲಾಗಿದೆ. ಮಧು ಬಂಗಾರಪ್ಪ ಪಕ್ಷಕ್ಕೆ ಸೇರ್ಪಡೆ ಆದ ನಂತರ ಇದೇ ಮೊದಲ ಸಲ ಶಿವಮೊಗ್ಗಕ್ಕೆ ಬರುತಿದ್ದು, ಭವ್ಯವಾಗಿ ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪಕ್ಷದ ಕಚೇರಿಯ ಮುಂಭಾಗದಲ್ಲೂ ಬೃಹತ್ ಫ್ಲೆಕ್ಸ್ ಹಾಕಲಾಗಿದೆ.

https://www.suddikanaja.com/2021/03/02/madu-bandarappa-said-about-joining-congress/

error: Content is protected !!