ಸುದ್ದಿ ಕಣಜ.ಕಾಂ | CITY | AASHRAYA HOUSE
ಶಿವಮೊಗ್ಗ: ಗೋವಿಂದಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಆಶ್ರಯ ಮನೆಗಳ ಕಾಮಗಾರಿ ಭರದಿಂದ ಸಾಗಿದೆ. ಮಾದರಿ ಅಪಾರ್ಟ್ಮೆಂಟ್ ನಿರ್ಮಾಣಗೊಂಡಿದ್ದು, ಅದರ ಮಾದರಿಯಲ್ಲಿಯೇ ಇನ್ನಷ್ಟು ಮನೆಗಳ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ.
ಹೇಗೆ ನಡೆಯುತ್ತಿದೆ ಆಶ್ರಯ ಮನೆಗಳ ನಿರ್ಮಾಣ ಕೆಲಸ ವಿಡಿಯೋಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ (VIDEO REPORT)
ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಅವರ ನೇತೃತ್ವದಲ್ಲಿ ಗುರುವಾರ ಗೋವಿಂದಪುರಕ್ಕೆ ಭೇಟಿ ನೀಡಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆಯಲಾಯಿತು.
ಉಪ ಮೇಯರ್ ಶಂಕರ್ ಗನ್ನಿ, ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.