ಸುದ್ದಿ ಕಣಜ.ಕಾಂ | DISTRICT | POLITICS
ಶಿವಮೊಗ್ಗ: ದಿನ ನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನ ವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ- ನಗರದಲ್ಲಿ ಶನಿವಾರ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಸೌದೆ ಒಲೆ ಹಚ್ಚಿ ಪ್ರತಿಭಟನೆ ಮಾಡಲಾಯಿತು.
ಲಾಕ್ ಡೌನ್ ಮುಗಿಯುವವರೆಗೆ ಹಸಿದವರಿಗೆ ಅನ್ನ, ಎಲ್ಲೆಲ್ಲಿ ವಿತರಿಸಲಾಯಿತು ಗೊತ್ತಾ?
ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡುತ್ತಿರುವ ಜನ ವಿರೋಧಿ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ಮಹಾವೀರ ವೃತ್ತ ದಲ್ಲಿ ವಿನೂತನವಾಗಿ ಪ್ರತಿಭಟಿಸಲಾಯಿತು.
ಎಲ್ಲಿ ಹೋಯಿತು ಅಚ್ಛೆ ದಿನ್ ಭರವಸೆ?
ದೇಶಕ್ಕೆ ಅಚ್ಚೆ ದಿನ್ ತರುತ್ತೇನೆಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನ ಬಳಕೆ ವಸ್ತುಗಳ ಬೆಲೆ ಏರಿಸುತ್ತಿದೆ. ಶ್ರೀಸಾಮಾನ್ಯರು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
READ | ನಾಳೆ ಎಪಿಎಂಸಿ, ಇಂಡಸ್ಟ್ರಿಯಲ್ ಏರಿಯಾದಲ್ಲಿ ಪವರ್ ಕಟ್
ರೈತ, ಕಾರ್ಮಿಕ ಮತ್ತು ಜನ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಲು ಹೊರಟಿರುವ ಸರ್ಕಾರ ದೇಶದ ಅದು ಮೂರು ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಜತೆಗೆ, ಕೋವಿಡ್ ನಿರ್ವಹಣೆಯಲ್ಲೂ ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಕೂಡಲೇ ರಾಷ್ಟ್ರಪತಿಗಳು ಕೇಂದ್ರ ಸರ್ಕಾರವನ್ನು ವಜಾ ಮಾಡಬೇಕು ಒತ್ತಾಯಿಸಿದ್ದಾರೆ.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್ ನೇತೃತ್ವ ವಹಿಸಿದ್ದರು. ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ , ರಾಜ್ಯ ಕಾರ್ಯದರ್ಶಿ ಮಹಮ್ಮದ್ ರಫಿ, ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷ ಎನ್. ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಪಾಲಿಕೆ ವಿರೋಧ ಪಕ್ಷ ನಾಯಕಿ ಯಮುನಾ ರಂಗೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.