ಸುದ್ದಿ ಕಣಜ.ಕಾಂ | CITY | EDUCATION
ಶಿವಮೊಗ್ಗ: ಕೊರೊನಾ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಪ್ರಾಥಮಿಕ ಶಾಲೆಗಳಲ್ಲಿ ಭೌತಿಕ ತರಗತಿ ಸೋಮವಾರದಿಂದ ಪುನರಾರಂಭಗೊಂಡಿವೆ.
ಹೊಸಮನೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಹೇಗೆ ಸ್ವಾಗತಿಸಲಾಯಿತು, ವಿಡಿಯೋ ಲಿಂಕ್ ಮೇಲೆ ಕ್ಲಿಕ್ ಮಾಡಿ (VIDEO REPORT)
ಮೊದಲ ದಿನ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ತಮ್ಮ ವಾರ್ಡ್ ವ್ಯಾಪ್ತಿಯ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬೆರೆತು ಶಾಲೆ ಪುನರಾರಂಭಕ್ಕೆ ಚಾಲನೆ ನೀಡಿದರು.
ಮಕ್ಕಳಿಗೆ ಮಾಸ್ಕ್ ತೊಡಿಸಿ, ಬುಕ್ ವಿತರಣೆ
ನಗರದ ಹೊಸಮನೆ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಲಾಕ್ ಡೌನ್ ನಂತರ ಮೊಟ್ಟ ಮೊದಲ ಬಾರಿಗೆ ಶಾಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಮಕ್ಕಳಿಗೆ ಸಿಹಿ ಹಂಚಿ ಸ್ವಾಗತಿಸಿದರು.
ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧಾರಣೆ ಮಾಡಬೇಕು. ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂಬುವುದರ ಸೂಚಕವಾಗಿ ಮಾಸ್ಕ್ ವಿತರಣೆ ಮಾಡಲಾಯಿತು.
ಶಾಲೆಯ ಮುಖ್ಯ ಶಿಕ್ಷಕ ಎಸ್.ಲೋಹಿತ್ ಕುಮಾರ್ ಶಿಕ್ಷಕಿ ಪದ್ಮಾವತಿ, ಎನ್. ಟಿ. ರವಿಕುಮಾರ್ ಉಪಸ್ಥಿತರಿದ್ದರು.
ಅಕಾಲಿಕ ಮಳೆಗೆ ಹೊಸಮನೆಯಲ್ಲಿ ನೆರೆ, ಮನೆಯೊಳಗೆ ಹೊಕ್ಕಿದ ನೀರು, ರಾತ್ರಿಯಿಡೀ ಜನರ ಸಂಕಟ