ಸುದ್ದಿ ಕಣಜ.ಕಾಂ | DISTRICT | EDUCATION
ಶಿವಮೊಗ್ಗ: ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಚರ್ಚಿಸಿ ಇತ್ಯರ್ಥಗೊಳಿಸಬೇಕು ಎಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಮಾಡಲಾಯಿತು.
https://www.suddikanaja.com/2021/06/19/smart-city-works-in-shivamogga/
ಈ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು, ನೂತನ ಸಹಾಯಕ ಪ್ರಾಧ್ಯಾಪಕ ನೇಮಕಾತಿ ವಿಚಾರ ತಡೆ ಹಿಡಿದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಬೇಕು. ಈ ಬಗ್ಗೆ ಉಭಯ ಸದನಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಾದ್ಯಂತ ನಿತ್ಯ ಪ್ರತಿಭಟನೆ
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಸೆಪ್ಟೆಂಬರ್ 14 ರಿಂದ 18ರ ವರೆಗೆ ನಿತ್ಯ ಡಿಸಿ ಕಚೇರಿ ಮುಂದೆ ಒಂದು ಗಂಟೆ ಪ್ರತಿಭಟನೆ ಮಾಡಲಾಗುವುದು ಎಂದು ಮನವಿ ಪತ್ರದಲ್ಲಿ ಸಮಿತಿ ಅಧ್ಯಕ್ಷ ಡಾ. ಸೋಮಶೇಖರ್ ಶಿಮೊಗ್ಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 412 ಪ್ರಥಮ ದರ್ಜೆ ಕಾಲೇಜುಗಳಲ್ಲಿ 14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಅನೇಕ ವರ್ಷಗಳಿಂದ ಕೆಲಸ ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಕಷ್ಟಕ್ಕೆ ಸಿಲುಕಿದ್ದಾರೆ. ಜೀವನ ಭದ್ರತೆ ಇಲ್ಲವಾಗಿದೆ. ಕಳೆದ ಹಲವು ತಿಂಗಳಿಂದ ವೇತನ ಕೂಡ ಸಿಕ್ಕಿಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2020/12/29/first-grade-college-guest-lecture-protest-in-shivamogga/