ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ 2021-22ನೇ ಸಾಲಿಗೆ ಉದ್ಯೋಗಿನಿ ಯೋಜನೆ ಅಡಿ ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿ ಕೈಗಾರಿಕೆ ಇತ್ಯಾದಿ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಸಹಾಯ ಧನ ನೀಡಲು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ವಯಸ್ಸಿನ ದೃಢೀಕರಣಕ್ಕಾಗಿ ಚುನಾವಣಾ ಗುರುತಿನ ಚೀಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಎಸ್ಎಸ್ಎಲ್ಸಿ ಅಂಕಪಟ್ಟಿ ಅಥವಾ ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು.
READ | ಪೋಷಕರೇ ಹುಷಾರ್! ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಉಲ್ಬಣ, ಯಾವ್ಯಾವ ಜಿಲ್ಲೆಗಳಲ್ಲಿ ಹೆಚ್ಚು ಕೇಸ್?
ಅರ್ಜಿ ಸಲ್ಲಿಕೆ ಈ ಮಾನದಂಡ ಅನ್ವಯ
ಕುಟುಂಬದ ವಾರ್ಷಿಕ ಆದಾಯ ಎಸ್ಸಿ, ಎಸ್ಟಿ ₹2 ಲಕ್ಷ, ವಿಶೇಷ ವರ್ಗ ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ ₹1.50 ಲಕ್ಷ ಮೀರಬಾರದು. ವಿಧವೆಯರು, ಸಂಕಷ್ಟಕ್ಕೊಳಗಾದ ಮಹಿಳೆಯರು, ಅಂಗವಿಕಲ ಮಹಿಳೆಯರಿಗೆ ಆದಾಯ ಮಿತಿ ಇರುವುದಿಲ್ಲ. ಅರ್ಜಿದಾರರು ರಾಜ್ಯದ ಕಾಯಂ ನಿವಾಸಿಯಾಗಿರಬೇಕು. ಸಾಲ ಮಂಜೂರಾಗಿ ಬಿಡುಗಡೆಯ ಮುನ್ನ ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕಡೆಯ ದಿನವಾಗಿದ್ದು, ಅರ್ಜಿ ಹಾಗೂ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಥವಾ ಆಯಾ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಹಾಗೂ ಮೊ.ಸಂ: 9482031284, 9901755700 ಅನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಸುರೇಶ್ ತಿಳಿಸಿದ್ದಾರೆ.
https://www.suddikanaja.com/2021/01/12/raf-platoon-in-bhadravathi/