`ಬಲವಂತದ ಮತಾಂತರ ಹೇಳಿಕೆ ಖಂಡಿಸಿದ ಕ್ರೈಸ್ತ ಫೋರಂ, ಮತಾಂತರ ಕಾಯ್ದೆ ತಿದ್ದುಪಡಿ ಮೂಲಕ ಧಾರ್ಮಿಕ ಸ್ವಾತಂತ್ರ್ಯ ಧಕ್ಕೆ ಹುನ್ನಾರ’

 

ಸುದ್ದಿ ಕಣಜ.ಕಾಂ | DISTRICT | RELIGIOUS
ಶಿವಮೊಗ್ಗ: ಮತಾಂತರ ಕಾಯ್ದೆಗೆ ತಿದ್ದುಪಡಿ ಹಿಂದೆ ಕ್ರೈಸ್ತರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಹುನ್ನಾರ ಅಡಗಿದೆ ಎಂದು ಕ್ರಿಶ್ಚಿಯನ್ ಪೋರಂ ಫಾರ್ ಹ್ಯೂಮನ್ ರೈಟ್ಸ್ ರಾಜ್ಯಾಧ್ಯಕ್ಷ ಡಿ.ರಾಜಶೇಖರ್ ಆರೋಪಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾರ್ಥನೆಗಳಲ್ಲಿ ಭಾಗವಹಿಸುವ ಭಕ್ತರ ಧಾರ್ಮಿಕ ಸ್ವಾತಂತ್ರ್ಯ ಕಿತ್ತುಕೊಳ್ಳುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುತ್ತಿದೆ. ಈ ರೀತಿಯ ದೌರ್ಜನ್ಯ, ದಬ್ಬಾಳಿಕೆ ಮುಂದುವರಿದರೆ ಶಾಂತಿಯುತ ಹಾಗೂ ಕಾನೂನು ಹೋರಾಟ ಮಾಡಲಾಗುವುದು ಎಂದು ಹೇಳಿದರು.

ಗೂಳಿಹಟ್ಟಿ ಶೇಖರ್ ಹೇಳಿಕೆಯ ವಿರುದ್ಧ ಗರಂ

`ವಿಧಾನಸಭೆ ಅಧಿವೇಶನದಲ್ಲಿ ಗೂಳಿಹಟ್ಟಿ ಶೇಖರ್ ಅವರು ರಾಜ್ಯದಲ್ಲಿ ಕ್ರೈಸ್ತ ಮಿಷನರಿಗಳು ಬಲವಂತದ ಮತಾಂತರ ಮಾಡುತ್ತಿದ್ದಾರೆ. ತಡೆಯಲು ಹೋದಾಗ ಜಾತಿ ನಿಂದನೆ, ಅತ್ಯಾಚಾರ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ. ಇದು ವಾಸ್ತವಕ್ಕೆ ದೂರವಾದ ಆರೋಪ ಹಾಗೂ ರಾಜ್ಯದಲ್ಲಿ ಇಂತಹ ಪ್ರಕರಣಗಳು ದಾಖಲಾಗಿಲ್ಲ ಎಂದು ಹೇಳಿದರು. ಜೆ. ಭಾಸ್ಕರ್ ಬಾಬು, ಎಂ.ಎಸ್. ಸ್ಯಾಮ್ಯುಯೆಲ್, ಹರೀಶ್, ಶಿವರಾಜ್ ಉಪಸ್ಥಿತರಿದ್ದರು.

ಮರಳು ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್, ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?