ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ಪುರಲೆ ಕೆರೆ ಏರಿಯ ಮೇಲೆ ಸೋಮವಾರ ರಾತ್ರಿ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ.
READ | ಯುವಕನ ಜೀವ ನುಂಗಿದ ರಸ್ತೆಯಲ್ಲಿನ ಗುಂಡಿ!
ಹೊಸಮನೆ ಬಡಾವಣೆಯ ನಿವಾಸಿ ಅಭಿಷೇಕ್ (23) ಎಂಬಾತ ಮೃತಪಟ್ಟಿದ್ದಾನೆ. ಪುರಲೆಯಿಂದ ಹೊಸಮನೆಗೆ ಬರುವಾಗ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಭಿಷೇಕ್ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಮಾರ್ಗ ಮಧ್ಯೆಯೇ ಆತ ಅಸುನೀಗಿದ್ದಾನೆ.
ಶಿವಮೊಗ್ಗದ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.