ಶಿವಮೊಗ್ಗಕ್ಕೆ 50 ಹಾಸಿಗೆಯ ಹೃದ್ರೋಗ ಆಸ್ಪತ್ರೆ ಮಂಜೂರು

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಗೆ 50 ಹಾಸಿಗೆಯ ಹೃದ್ರೋಗ ಆಸ್ಪತ್ರೆ ಮಂಜೂರಾಗಿದ್ದು ಅನುಸರಣೆ ಹಂತದಲ್ಲಿದೆ ಎಂದು ಸಿಮ್ಸ್ ನಿರ್ದೇಶಕ ಡಾ.ಓ.ಎಸ್.ಸಿದ್ದಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ನಗರದ ಸಿಮ್ಸ್ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ `ವಿಶ್ವ ಹೃದಯ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನೊಂದು ವರ್ಷದಲ್ಲಿ ಎಂಸಿಎ ನಿಯಮಾವಳಿ ಅನ್ವಯ ಹುದ್ದೆಗಳನ್ನು ಸೃಜಿಸಿ ಭರ್ತಿ ಮಾಡಲಾಗುವುದು. ಈಗಾಗಲೇ 4 ಜನ ಕಾರ್ಡಿಯಾಲಜಿಸ್ಟ್ ನೇಮಿಸಲು ಅಧಿಸೂಚಿಸಲಾಗಿದೆ. ಈ ನಾಲ್ಕು ಹುದ್ದೆ ತುಂಬಿದರೆ ಪೂರ್ಣ ಪ್ರಮಾಣದಲ್ಲಿ ವಿಭಾಗ ಕೆಲಸ ಮಾಡಲಿದೆ ಎಂದು ಹೇಳಿದರು.

ರೇಡಿಯಾಲಜಿ ವಿಭಾಗ ಕೂಡ ಸದ್ಯದಲ್ಲೇ ಆರಂಭವಾಗಲಿದ್ದು. ಶುಶ್ರೂಷಕರ 95 ಹುದ್ದೆ ಖಾಲಿ ಇವೆ. ಭರ್ತಿಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸಂಸ್ಥೆಗೆ 150 ಡಿ-ಗ್ರೂಪ್ ಹುದ್ದೆ ಮಂಜೂರು ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.
ಡಿ.ಎಚ್.ಒ ಡಾ.ರಾಜೇಶ್ ಸುರಗಿಹಳ್ಳಿ, ಸಿಮ್ಸ್ ಕಾರ್ಡಿಯಾಲಜಿ ವಿಭಾಗದ ಡಾ.ಡಿ.ಎಂ.ಪರಮೇಶ್ವರಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಓ.ಮಲ್ಲಪ್ಪ, ಆರ್‍ಸಿಎಚ್‍ಓ ನಾಗರಾಜ್ ನಾಯಕ್, ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಡಾ.ಎಂ.ಡಿ.ಕಟ್ಟಿ, ಡಾ.ಮಹೇಶ್ ಮೂರ್ತಿ ಉಪಸ್ಥಿತರಿದ್ದರು.

https://www.suddikanaja.com/2021/08/07/cath-lab-facility-available-in-shivamogga/

error: Content is protected !!