ಬೈಕ್‍ಗಳ ನಡುವೆ ಡಿಕ್ಕಿ, ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

 

 

ಸುದ್ದಿ ಕಣಜ.ಕಾಂ | CITY | CRIME
ಶಿವಮೊಗ್ಗ: ವಾಜಪೇಯಿ ಬಡಾವಣೆಯ ತೂಕ ಮತ್ತು ಅಳತೆ ಮಾಪನ ಇಲಾಖೆ ಸಮೀಪ ಎರಡು ಬೈಕ್ ಗಳ ನಡುವೆ ಇತ್ತೀಚೆಗೆ ಡಿಕ್ಕಿ ಸಂಭವಿಸಿದ್ದು, ಐವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರ ಪೈಕಿ ಅಭಿಷೇಕ್, ಮಧುಸೂದನ್, ಸಚಿನ್ ಅವರ ಗುರುತು ಪತ್ತೆಯಾಗಿದೆ. ಇವರು ಹಾವೇರಿ ಮೂಲದವರು ಎನ್ನಲಾಗಿದೆ. ಆದರೆ, ಇನ್ನೂ ಇಬ್ಬರ ಬಗ್ಗೆ ಮಾಹಿತಿ ಲಭಿಸಿಲ್ಲ.
ಅಪಘಾತಕ್ಕೆ ವೇಗವೇ ಕಾರಣ
ಅತಿ ವೇಗದಿಂದ ವಾಹನವನ್ನು ಚಾಲನೆ ಮಾಡಿಕೊಂಡು ಬಂದ ಪರಿಣಾಮ ಡಿಕ್ಕಿ ಸಂಭವಿಸಿದೆ. ಮೂವರು ವಿದ್ಯಾರ್ಥಿಗಳು ಶಿವಮೊಗ್ಗ ನಗರದಿಂದ ಪ್ರೊ.ಬಿ.ಕೃಷ್ಣಪ್ಪ ಸ್ಮಾರಕ ಹಾಸ್ಟೆಲ್ ಕಡೆಗೆ ಹೋಗುವಾಗ ಎದುರುಗಡೆಯಿಂದ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆದಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!