ಸುದ್ದಿ ಕಣಜ.ಕಾಂ | KARNATAKA | EDUCATION
ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮಂಗಳೂರು ಕೇಂದ್ರದಲ್ಲಿ 2021-22ನೇ ಸಾಲಿನ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರೀಸಿಷನ್ ಮ್ಯಾನಫ್ಯಾಕ್ಚರಿಂಗ್ ಕೋರ್ಸ್ ಪ್ರವೇಶಕ್ಕಾಗಿ ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಇಲ್ಲವೇ ಐಟಿಐ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
https://www.suddikanaja.com/2020/12/21/iti-exam-will-be-conduct-by-kea-cn-ashwath-narayan-said/
ತರಬೇತಿ ಬಳಿಕ ಕ್ಯಾಂಪಸ್ ಸಂದರ್ಶನ
ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗುವುದು. ವಿದ್ಯಾರ್ಥಿಗಳಿಗೆ ಉಚಿತವಾಗಿ ಹಾಸ್ಟೆಲ್ ವ್ಯವಸ್ಥೆ ಮಾಡಿಕೊಡಲಾಗುವುದು.
ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಪ್ರವೇಶ ನೀಡಲಾಗುವುದು. ಪಿಯುಸಿ (ಸೈನ್ಸ್) ಮತ್ತು ಐಟಿಐ ಪಾಸಾದ ಅಭ್ಯರ್ಥಿಗಳು ನೇರವಾಗಿ ಡಿಪ್ಲೋಮಾ ಎರಡನೆ ವರ್ಷಕ್ಕೆ ಪ್ರವೇಶ ಪಡೆಯಬಹುದು.
ವಿದ್ಯಾರ್ಥಿಗಳಿಗೆ ತಮ್ಮ ನಿಯಮಿತ ಬೋಧನಾ ಚಟುವಟಿಕೆಗಳ ಜೊತೆಗೆ ಕೈಗಾರಿಕೆಯ ಅನುಭವ ದೊರೆಯುವುದು. ಈ ಸಂಸ್ಥೆಯಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಸ್ವಉದ್ಯೋಗಿ, ಉದ್ಯೋಗಿಯಾಗಲು ನಮ್ಮ ಶಿಕ್ಷಣ ಸಹಕಾರಿಯಾಗುತ್ತದೆ. ಜತೆಗೆ, ಹೆಸರಾಂತ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ಲಭ್ಯವಾಗುತ್ತದೆ. ಇದುವರೆಗೂ ಜಿಟಿಟಿಸಿಯಲ್ಲಿ ಡಿಪ್ಲೋಮಾ ಶಿಕ್ಷಣ ಪಡೆದ ಎಲ್ಲ ವಿದ್ಯಾರ್ಥಿಗಳು ಉದ್ಯೋಗ ಪಡೆದಿದ್ದಾರೆ. ಕೆಲವು ವಿದ್ಯಾರ್ಥಿಗಳು ಸ್ವಂತ ಉದ್ದಿಮೆ ಆರಂಭಿಸಿ ಯಶ್ವಸಿಯಾಗಿದ್ದಾರೆ.
ಮಾಸಿಕ 10,000 ವಿದ್ಯಾರ್ಥಿ ವೇತನ
ಡಿಪ್ಲೋಮಾ ಅಂತಿಮ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ ಕನಿಷ್ಠ ₹10,000 ವಿದ್ಯಾರ್ಥಿ ವೇತನ ದೊರೆಯುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 7ಇ, ಕೆಐಎಡಿಬಿ ಕೈಗಾರಿಕಾ ಪ್ರದೇಶ, ಬೈಕಂಪಾಡಿ, ಮಂಗಳೂರು 575011 ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 7975621917, ಸ್ಥಿರ ದೂರವಾಣಿ 0824-2408003 ಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.
https://www.suddikanaja.com/2021/05/26/prisoner-deid-due-to-heart-attack/