ಸುದ್ದಿ ಕಣಜ.ಕಾಂ | DISTRICT | POLITICS
ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಗಣಿಗಾರಿಕೆ ಪುನರಾರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಲ್ಲು ಗಣಿಗಾರಿಕೆ ಸ್ಥಗಿತಗೊಂಡಿರುವುದರಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟಾಗಿದೆ ಎಂದು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಸ್ಪಂದಿಸಿ ಸಿಎಂ ಪ್ರತಿಕ್ರಿಯಿಸಿದರು.
READ | ಚಿನ್ನ, ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್, ಬೆಲೆಯಲ್ಲಿ ಮತ್ತೆ ಇಳಿಕೆ, ಎಷ್ಟಿದೆ ಇಂದಿನ ಬೆಲೆ?
ಜಿಲ್ಲೆಯಲ್ಲಿ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬಾರದ ಪರವಾನಗಿ ಹೊಂದಿರುವ ಕಲ್ಲು ಗಣಿಗಾರಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಸೂಚಿಸಿದರು.
ವಾರದೊಳಗೆ ಸಾಧ್ಯ ಇರುವಲ್ಲಿ ಕಲ್ಲು ಗಣಿಗಾರಿಕೆಯನ್ನು ಪುನರಾರಂಭಿಸಲು ಅನುಮತಿ ನೀಡುವಂತೆ ತಾಕೀತು ಮಾಡಿದರು.
ಸಂರಕ್ಷಿತ ಅರಣ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಅವರು ತಿಳಿಸಿದರು.
READ | ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ದರ
ವಿಶೇಷ ಅರಣ್ಯ ಅಧಿಕಾರಿ ನೇಮಕ
ಶಿವಮೊಗ್ಗ, ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಅರಣ್ಯ ಇಲಾಖೆ ಯೋಜನೆಗಳ ಪ್ರಗತಿಯ ವೇಗ ಹೆಚ್ಚಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಶಿವಮೊಗ್ಗ ಜಿಲ್ಲೆಗೆ ವಿಶೇಷ ಅರಣ್ಯ ಅಧಿಕಾರಿಗಳನ್ನು ನೇಮಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಕುವೆಂಪು ವಿಶ್ವವಿದ್ಯಾಲಯದ ಅರಣ್ಯ ಭೂಮಿ ಗುತ್ತಿಗೆ ನವೀಕರಣಕ್ಕೆ ಅರಣ್ಯ ಮತ್ತು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಜರುಗಿಸುವಂತೆ ಹೇಳಿದರು.
ಸಚಿವರಾದ ಅರಬೈಲ್ ಶಿವರಾಮ್, ಆರಗ ಜ್ಞಾನೇಂದ್ರ, ಉಮೇಶ್ ಕತ್ತಿ, ಸುನೀಲ್ ಕುಮಾರ್, ಎಂ.ಎಸ್.ಐ.ಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮೊದಲಾದವರು ಉಪಸ್ಥಿತರಿದ್ದರು.
https://www.suddikanaja.com/2021/03/22/drone-eye-on-mining/