ಸುದ್ದಿ ಕಣಜ.ಕಾಂ | CIRY | CRIME
ಶಿವಮೊಗ್ಗ: ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ₹80,000 ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಕಲ್ಲೂರು ಗ್ರಾಮದ ಚಾನಲ್ ಹತ್ತಿರ ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ತುಂಗಾ ನಗರ ಪೊಲೀಸ್ ಠಾಣೆ ಪಿಐ ಹಾಗೂ ಸಿಬ್ಬಂದಿ ತಂಡವು ದಾಳಿ ನಡೆಸಿದೆ.
ಆರೋಪಿಗಳಿಂದ 2 ಕೆ.ಜಿ 120 ಗ್ರಾಂ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಒಂದು ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.