ಕರ್ನಾಟಕ ಹೈಕೋರ್ಟ್ ನಲ್ಲಿ ಡಿಗ್ರಿ, ಪಿಜಿ ಮುಗಿಸಿದವರಿಗೆ ಉದ್ಯೋಗ ಅವಕಾಶ, ಅರ್ಜಿ ಸಲ್ಲಿಕೆಗೂ ಮುನ್ನ ಓದಿ

 

 

ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಬೆಂಗಳೂರಿನ ಹೈಕೋರ್ಟ್ ನಲ್ಲಿ ಉದ್ಯೋಗ ಅವಕಾಶವಿದ್ದು, ಅಧಿಸೂಚನೆ ಹೊರಡಿಸಲಾಗಿದೆ.
ಭಾಷಾಂತರಕಾರರ ಮೂರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕಾರ್ಯಕ್ಷೇತ್ರ ಕೂಡ ಬೆಂಗಳೂರೇ ಇದೆ. ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಪದವಿ ಹಾಗೂ ಸ್ನಾತಕೋತ್ತರದಲ್ಲಿ ಕನಿಷ್ಠ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಪದವಿಯಲ್ಲಿ ಕನ್ನಡ ಒಂದು ಭಾಷೆಯಾಗಿ ಹಾಗೂ ಪಿಜಿಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಎಂದು ಸೂಚನೆ ನೀಡಲಾಗಿದೆ.
ಈ‌ ಎಲ್ಲ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇರ ನೇಮಕಾತಿ ನಡೆಯಲಿದ್ದು, ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

READ | ನಾಳೆಯಿಂದ ಜೋಗಕ್ಕೆ ಬರಬೇಕಾದರೆ ಈ ಹೊಸ ನಿಯಮಗಳು ಅನ್ವಯ, ಈ ದಾಖಲೆ ಇದ್ದರಷ್ಟೇ ಜಲಪಾತ ದರ್ಶನ

ಅರ್ಜಿ ಸಲ್ಲಿಕೆಯ ವಯೋಮಿತಿ
ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ 35 ವರ್ಷ. ಒಬಿಸಿಗೆ 38 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಅಂತಿಮ ದಿನಾಂಕ
ಕರ್ನಾಟಕ ಹೈಕೋರ್ಟ್ ನಲ್ಲಿ ಭಾಷಾಂತರಕಾರ ಹುದ್ದೆಗೆ ಸೆಪ್ಟೆಂಬರ್ 15 ರಂದು ಅಧಿಸೂಚನೆಯನ್ನು‌ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 16 ಅಂತಿಮ ದಿನಾಂಕವಾಗಿದೆ.

https://www.suddikanaja.com/2021/07/15/job-vacancy-in-national-youth-center/

error: Content is protected !!