ಶಿವಮೊಗ್ಗ ಹೆಮ್ಮೆ | ದೇಶದ ವಿವಿಗಳ ರೇಸ್ ನಲ್ಲಿ ಗುರುತಿಸಿಕೊಂಡ ಕುವೆಂಪು ವಿವಿ, ಸತತ 4ನೇ ವರ್ಷವೂ ಟಾಪ್ 100ರೊಳಗೆ ಸ್ಥಾನ

 

 

ಸುದ್ದಿ ಕಣಜ.ಕಾಂ | KARNATAKA | EDUCATION
ಶಿವಮೊಗ್ಗ: ನವ ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಬುಧವಾರ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2021ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‍ಐಆರ್‍ಎಫ್)ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 81ನೇ ರ‍್ಯಾಂಕ್ ಗಳಿಸಿದೆ. ಈ ಮೂಲಕ ಸತತ ನಾಲ್ಕನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ.

https://www.suddikanaja.com/2021/07/28/race-begin-for-minister-portfolio-in-shivammogga/

ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗವಹಿಸಿದ್ದ ಈ ರ್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. 40.40 ಅಂಕಗಳನ್ನು ಪಡೆದಿದೆ. 2017ರಲ್ಲಿ 150ರಿಂದ 200ರ ವರ್ಗದಲ್ಲಿ ಸ್ಥಾನ ಪಡೆದಿದ್ದ ವಿಶ್ವವಿದ್ಯಾಲಯ, 2018ರಲ್ಲಿ ಭಾರಿ ಜಿಗಿತ ಕಂಡಿದ್ದು 78ನೇ ಸ್ಥಾನಕ್ಕೇರಿತ್ತು. ಪ್ರಸಕ್ತ ಸಾಲಿನಲ್ಲಿ 81ನೇ ರ್ಯಾಂಕ್ ಪಡೆಯುವುದರೊಂದಿಗೆ, ಕೋವಿಡ್-19 ಕಾರಣದಿಂದ ಉನ್ನತ ಶಿಕ್ಷಣದ ಚಟುವಟಿಕೆಗಳಿಗೆ ಹಿನ್ನೆಡೆಯಾಗಿದ್ದರೂ, ಟಾಪ್ 100ರೊಳಗೆ ಸ್ಥಾನ ಪಡೆದಿದೆ.

VIDEO REPORT | ಹಸುವನ್ನು ರಕ್ಷಿಸಿದ ಮುಸ್ಲಿಂ‌ ಯುವಕರು

ರಾಜ್ಯದ ಮೈಸೂರು, ಬೆಂಗಳೂರು, ಕುವೆಂಪು ವಿವಿ
ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ಸಂಸ್ಥೆಗಳು, ಎಂಜಿನಿಯರಿಂಗ್ ನಂತಹ ವೃತ್ತಿಪರ ಕೋರ್ಸ್ ಗಳನ್ನು ನಡೆಸುವ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ದೇಶದಾದ್ಯಂತ (4,100) ಶಿಕ್ಷಣ ಸಂಸ್ಥೆಗಳು ಶ್ರೇಣೀಕರಣಕ್ಕೆ ಒಳಪಟ್ಟಿವೆ. ಕರ್ನಾಟಕದ ವಿಶ್ವವಿದ್ಯಾಲಯಗಳ ಪೈಕಿ ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಕ್ರಮವಾಗಿ 91 ಮತ್ತು 69ನೇ ರ್ಯಾಂಕ್ ಪಡೆಯುವುದರೊಂದಿಗೆ ರಾಜ್ಯಮಟ್ಟದಲ್ಲಿ ಮೊದಲೆರಡು ಸ್ಥಾನ ಪಡೆದಿವೆ.

READ | ಕಾಳಿಂಗ ಸರ್ಪದಲ್ಲಿ 4 ಪ್ರಬೇಧ ಇರುವುದು ಅಧ್ಯಯನದಿಂದ ಸಾಬೀತು, ಕಂಡುಕೊಂಡ ಸತ್ಯಾಂಶಗಳೇನು‌ ಗೊತ್ತಾ, ಕಿಂಗ್ ಕೋಬ್ರಾ ಪೂರ್ಣ ಮಾಹಿತಿ ಇಲ್ಲಿದೆ

ದೇಶದ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಮತ್ತು ಒಟ್ಟಾರೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2015ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎನ್‍ಐಆರ್‍ಎಫ್ ರ್ಯಾಂಕಿಂಗ್ ಪ್ರಾರಂಭಿಸಿದ್ದು, ಈಗ ಆರನೇ ಆವೃತ್ತಿಯನ್ನು ಬಿಡುಗಡೆಗೊಳಿಸಿದೆ. ಎಂಜಿನಿಯರಿಂಗ್, ಮ್ಯಾನೇಜ್‍ಮೆಂಟ್, ವೈದ್ಯಕೀಯ, ವಾಸ್ತುಶಿಲ್ಪ, ಕಾನೂನು ವಿಷಯಗಳ ಶಿಕ್ಷಣ ಸಂಸ್ಥೆಗಳ ಜೊತೆಗೆ ವಿಶ್ವವಿದ್ಯಾಲಯಗಳ ಶ್ರೇಣೀಕರಣವನ್ನು ಎನ್‍ಐಆರ್‍ಎಫ್ ಅಡಿಯಲ್ಲಿ ಮಾನವ ಸಂಪನ್ಮೂಲ ಇಲಾಖೆ ಪ್ರತಿ ವರ್ಷ ಕೈಗೊಳ್ಳುತ್ತದೆ.

ಕೋವಿಡ್-19ನಂತಹ ಮಹಾಮಾರಿಯು ದೇಶದ ಶೈಕ್ಷಣಿಕ ರಂಗವನ್ನು ತೀವ್ರವಾಗಿ ಬಾಧಿಸುತ್ತಿದ್ದರೂ ವಿಶ್ವವಿದ್ಯಾಲಯದ ಅಧ್ಯಾಪಕರು ಗುಣಮಟ್ಟದ ಸಂಶೋಧನೆ, ಪ್ರಕಟಣೆ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ಮುಂದುವರೆಸಿರುವುದರ ಮೂಲಕ ಶೈಕ್ಷಣಿಕ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಮುಂಬರುವ ದಿನಗಳಲ್ಲಿ ರ್ಯಾಂಕಿಂಗ್ ಉತ್ತಮಪಡಿಸುವ ನಿಟ್ಟಿನಲ್ಲಿ ಸರ್ವ ಪ್ರಯತ್ನ ಮಾಡಲಾಗುವುದು
ಪ್ರೊ. ಬಿ.ಪಿ ವೀರಭದ್ರಪ್ಪ, ಕುಲಪತಿ

ಎನ್‍ಐಆರ್‍ಎಫ್ ರ‍್ಯಾಂಕಿಂಗ್ ಮಾನದಂಡಗಳೇನು
ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ್ಯಾಂಕಿಂಗ್ ಫ್ರೇಮ್ ವರ್ಕ್ ಐದು ಪ್ರಮುಖ ಮಾನದಂಡಗಳ ಆಧಾರದ ಮೇಲೆ ಶ್ರೇಣೀಕರಣ ನೀಡುತ್ತದೆ.

  1. ರ‍್ಯಾಂಕಿಂಗ್‍ಗೆ ಒಳಪಡುವ ಶೈಕ್ಷಣಿಕ ಸಂಸ್ಥೆಗಳಲ್ಲಿನ ಬೋಧನೆ, ಕಲಿಕೆಗಾಗಿ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳ ಸೌಲಭ್ಯ
  2. ಸಂಸ್ಥೆಗಳಲ್ಲಿ ನಡೆಯುತ್ತಿರುವ ಸಂಶೋಧನೆ ಮತ್ತು ವೃತ್ತಿಪರ ಚಟುವಟಿಕೆಗಳು, ಕೋರ್ಸ್ ಗಳ ಮೂಲಕ ಸಂಸ್ಥೆ ಸೃಷ್ಟಿಸುತ್ತಿರುವ ಉದ್ಯೋಗಾವಕಾಶ,
  3. ಪರೀಕ್ಷೆಯ ಉತ್ತೀರ್ಣದ ಪ್ರಮಾಣ ಸೇರಿದಂತೆ ಉನ್ನತ ಶಿಕ್ಷಣದ ಫಲಿತಾಂಶ, ಶೈಕ್ಷಣಿಕ ಸಂಸ್ಥೆಯ ಮೂಲಕ ನಡೆಯುತ್ತಿರುವ ವಿಸ್ತರಣೆ
  4. ಸಾಮಾಜಿಕ ಒಳಗೊಳ್ಳುವಿಕೆಯ ಚಟುವಟಿಕೆಗಳು, ಸಂಸ್ಥೆಯ ಕುರಿತು ಸಿಬ್ಬಂದಿ, ಸಂಶೋಧಕರು, ಸಾರ್ವಜನಿಕರ ಗ್ರಹಿಕೆ ಮತ್ತು ಅಭಿಪ್ರಾಯ

ಯಾವ ವಿವಿಗಳಿಗೆ ಯಾವ ಸ್ಥಾನ ಲಭಿಸಿದೆ?
ರಾಜ್ಯದ ಉನ್ನತ ಶಿಕ್ಷಣದ ಶೈಕ್ಷಣಿಕ ಸಂಸ್ಥೆಗಳ ಪೈಕಿ ಕುವೆಂಪು ವಿಶ್ವವಿದ್ಯಾಲಯ 7ನೇ ಸ್ಥಾನ ಪಡೆದಿದೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (1), ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (7), ಮೈಸೂರು ವಿಶ್ವವಿದ್ಯಾಲಯ (19), ಮೈಸೂರಿನ ಜೆ.ಎಸ್.ಎಸ್. ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಅಂಡ್ ರಿಸರ್ಚ್ (34), ಬೆಂಗಳೂರು ವಿಶ್ವವಿದ್ಯಾಲಯ (69), ಮಂಗಳೂರಿನ ನಿಟ್ಟೆ ತಾಂತ್ರಿಕ ವಿಶ್ವವಿದ್ಯಾಲಯ (77) ಸ್ಥಾನ ಪಡೆದಿವೆ. ಇನ್ನುಳಿದಂತೆ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ (82), ಬೆಳಗಾವಿಯ ಕೆಎಲ್‍ಈ ಸಂಸ್ಥೆ (91) ಮತ್ತು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ (99) ಟಾಪ್ 100ರಲ್ಲಿರುವ ಕರ್ನಾಟಕದ ಇತರೆ ಶೈಕ್ಷಣಿಕ ಸಂಸ್ಥೆಗಳು.

https://www.suddikanaja.com/2021/06/18/ugc-green-signal-for-online-course-start-in-kuvempu-university/

error: Content is protected !!