ಮುಳುಗಡೆ ಸಂತ್ರಸ್ತರ ಟಾಪ್ 3 ಬೇಡಿಕೆಗಳೇನು?

 

 

ಸುದ್ದಿ ಕಣಜ.ಕಾಂ‌ | DISTRICT | PROTEST
ಶಿವಮೊಗ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು‌ ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ  ಶರಾವತಿ ಮುಳುಗಡೆ ಸಂತ್ರಸ್ತರು ಬೃಹತ್ ಪ್ರತಿಭಟನೆ ಮಾಡಿದರು.

COVER STORY | ಶರಾವತಿ ಲಾಂಚ್ ಆಚೆಗೊಂದು ಅಜ್ಞಾತ ಬದುಕು, ಕಣ್ಮುಚ್ಚಿ ಕುಳಿತ ಆಡಳಿತ ಯಂತ್ರ

ಆರೋಪಗಳೇನು?

  1. ಸಾಗರ, ಹೊಸನಗರ ತಾಲ್ಲೂಕಿನ ರೈತರು 1 ಲಕ್ಷ ಎಕರೆಗೂ ಹೆಚ್ಚು ಭೂಮಿಯನ್ನು ಇದ್ಯುತ್ ಯೋಜನೆಗಾಗಿ ಕಳೆದುಕೊಂಡಿದ್ದಾರೆ. ಭೂಮಿ ಕಳೆದುಕೊಂಡು 60 ವರ್ಷವಾದರೂ ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗೆ ಮನೆ, ಜಮೀನಿನ ಹಕ್ಕುಪತ್ರಗಳನ್ನು ಇದುವರೆಗೂ ಕೊಟ್ಟಿಲ್ಲ.
  2. ಸಂತ್ರಸ್ತ ರೈತರಿಗೆ ಹಕ್ಕು ಪತ್ರ ನೀಡಲು ಆರಂಭವಾಗ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರಿಂದ ಡಿನೋಟಿಫಿಕೇಶನ್ ಮಾಡಿದ್ದು ಕಾನೂನು ಬಾಹಿರ ಎಂದು ಕಳೆದ ಮಾರ್ಚ್ ನಲ್ಲಿ ತೀರ್ಪು ನೀಡಿದೆ. ಈ ತೀರ್ಪು ಬಂದು ಆರು ತಿಂಗಳಾದರೂ, ಮೇಲ್ಮನವಿ ಸಲ್ಲಿಸಿಲ್ಲ. ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ

ಮುಳುಗಡೆ ಸಂತ್ರಸ್ತರ ಬೇಡಿಕೆಗಳೇನು?

  1. ರಾಜ್ಯ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ತಕ್ಷಣವೇ ಮೇಲ್ಮನವಿ ಸಲ್ಲಿಸಬೇಕು.
  2. ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ಅವರು ಮುಳುಗಡೆ ಸಂತ್ರಸ್ಥರ ಸಭೆಯಲ್ಲಿ ಕೈಗೊಂಡಿದ್ದ ನಡಾವಳಿ ಅನುಷ್ಠಾನಗೊಳಿಸಬೇಕು.
  3. ಕೆಲವರು ಮುಳುಗಡೆ ರೈತರನ್ನು ನಕಲಿ ಪರಿಸರವಾದಿಗಳು ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಇದು ತಪ್ಪಬೇಕು.

ಪ್ರತಿಭಟನೆಯಲ್ಲಿ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್, ಪ್ರಮುಖರಾದ ಎಂ.ಬಿ. ರಾಜಪ್ಪ, ಷಣ್ಮುಖ, ಧರ್ಮರಾಜ್, ವೆಂಕಟೇಶ್, ಕೃಷ್ಣಮೂರ್ತಿ, ಶಿವಣ್ಣ ಹಲವರು ಭಾಗವಹಿಸಿದ್ದರು.

error: Content is protected !!