ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರಂದು ಬೆಳಗ್ಗೆ 10 ಗಂಟೆಗೆ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ
ಸಾಗರ ರಸ್ತೆಯಲ್ಲಿರುವ ಗುತ್ಯಪ್ಪ ಕಾಲೊನಿಯ ಪಂಪಾ ನಗರಎರಡನೇ ಕ್ರಾಸ್ ನ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ಸುಮಾರು 5ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪೆನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಯಾರ್ಯಾರು ಭಾಗವಹಿಸಬಹುದು?
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾದ 18 ರಿಂದ 35 ವಯೋಮಾನದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-255294,ಮೊಬೈಲ್ ಸಂಖ್ಯೆ 9535312531, 9482023412 ಅನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.