ಸುದ್ದಿ ಕಣಜ.ಕಾಂ | DISTRICT | EXAMS
ಶಿವಮೊಗ್ಗ: ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ವತಿಯಿಂದ ಸೆಪ್ಟೆಂಬರ್ 19 ಮತ್ತು 20ರಂದು ನಡೆಯಲಿರುವ ಪರೀಕ್ಷೆಗೆ ಅಭ್ಯರ್ಥಿಗಳು ಹಾಗೂ ಪರೀಕ್ಷಾ ಮೇಲ್ವಿಚಾರಕರು ಮೊಬೈಲ್ ತರುವಂತಿಲ್ಲ.
ನಗರದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಮತ್ತು ಕಲ್ಯಾಣ ಕರ್ನಾಟಕ ವೃಂದದ ಕಿರಿಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಕೊಠಡಿ ಮೇಲ್ವಿಚಾರಕರುಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತರುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಂ ರಮೇಶ್ ತಿಳಿಸಿದ್ದಾರೆ.
https://www.suddikanaja.com/2021/07/14/covid-vaccine-out-of-stock-kagodu-timmappa-return/
ಇದಕ್ಕೋಸ್ಕರ ಜಿಲ್ಲಾಡಳಿತ ಸಭಾಂಗಣದಲ್ಕಿ ನಡೆದ ಸಭೆಯಲ್ಲಿ ಮಾತನಾಡಿದ ಎಡಿಸಿ ಡಾ.ನಾಗೇಂದ್ರ ಹೊನ್ನಳ್ಳಿ, ಪರೀಕ್ಷೆಗಳು ಯಾವುದೇ ಅಡಚಣೆಯಿಲ್ಲದೆ ನಡೆಯುವಂತೆ ಪ್ರತಿ ಕೇಂದ್ರಕ್ಕೆ ಮೇಲ್ವಿಚಾರಕರು, ತನಿಖಾ ತಂಡ ಹಾಗೂ ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ ಪ್ರದೇಶದಲ್ಲಿನ ಝೆರಾಕ್ಸ್, ಟೈಪಿಂಗ್ ಮಳಿಗೆಗಳನ್ನು ಮುಚ್ಚಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಂ.ರಮೇಶ್, ಜಿಲ್ಲಾ ಖಜಾನಾಧಿಕಾರಿ ಎಚ್.ಎಸ್.ಸಾವಿತ್ರಿ, ಲೋಕಸೇವಾ ಆಯೋಗದ ಪ್ರಾಂತೀಯ ಕಚೇರಿ ಅಧಿಕಾರಿಗಳು ಸೇರಿದಂತೆ ನಿಯೋಜಿತ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/02/08/st-reservation-to-kuruba-community-said-eshwrappa/