ಸುದ್ದಿ ಕಣಜ.ಕಾಂ | DISTRICT | HEALTH
ಶಿವಮೊಗ್ಗ: ಕೋವಿಡ್ ಮಂಗಳವಾರ ಒಬ್ಬರನ್ನು ಬಲಿ ಪಡೆದಿದೆ. ಜಿಲ್ಲೆಯಲ್ಲಿ ನಿರಂತರ ಕೊರೊನಾ ಸೋಂಕಿತರ ಇಳಿಮುಖವಾಗುತಿದ್ದು, ಹಲವು ದಿನಗಳಿಂದ ಕಾಯಿಲೆಗೆ ಯಾರೂ ಮೃತಪಟ್ಟಿರಲಿಲ್ಲ. ಆದರೆ, ಇಂದು ಒಬ್ಬರು ನಿಧನರಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 1,064 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ.
ಭದ್ರಾವತಿ, ಸೊರಬದಲ್ಲಿ ಸೊನ್ನೆಗೆ ಜಾರಿಗೆ ಕೊರೊನಾ ಕೇಸ್, ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಮಂಗಳವಾರ 6 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 38 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ತಾಲೂಕುವಾರು ವರದಿ | ಶಿವಮೊಗ್ಗದಲ್ಲಿ 1, ಭದ್ರಾವತಿ 1,ತೀರ್ಥಹಳ್ಳಿ 4,ಶಿಕಾರಿಪುರ, ಸೊರಬ, ಹೊಸನಗರ, ಸಾಗರ ತಾಲೂಕುಗಳಲ್ಲಿ ಸೋಂಕು ಪತ್ತೆಯಾಗಿಲ್ಲ.
READ | ಶಿವಮೊಗ್ಗದಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದವನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಸೋಂಕಿತರ ಸಂಪರ್ಕದಲ್ಲಿದ್ದ ಹಾಗೂ ರೋಗದ ಲಕ್ಷಣಗಳನ್ನು ಹೊಂದಿರುವ 4,494 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಹಳೆಯದ್ದೂ ಸೇರಿ ಒಟ್ಟು 3,032 ವರದಿಗಳು ನೆಗೆಟಿವ್ ಇರುವುದು ದೃಢಪಟ್ಟಿದೆ.
ಎಲ್ಲಿ ಎಷ್ಟು ಜನ ಚಿಕಿತ್ಸೆ | ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದಂತೆ, ಡಿಸಿಎಚ್ಸಿ 5, ಕೋವಿಡ್ ಕೇರ್ ಸೆಂಟರ್ ನಲ್ಲಿ 5, ಖಾಸಗಿ ಆಸ್ಪತ್ರೆಯಲ್ಲಿ 8,ಹೋಮ್ ಐಸೋಲೇಷನ್ ನಲ್ಲಿ 126 ಹಾಗೂ ಟ್ರಿಯೇಜ್ ಕೇಂದ್ರದಲ್ಲಿ 00 ಸೋಂಕಿತರಿದ್ದಾರೆ. 183 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.