ಸುದ್ದಿ ಕಣಜ.ಕಾಂ | KARNATAKA | AGRICULTURE
ಶಿವಮೊಗ್ಗ: ರೇಷ್ಮೆ ಬೆಳೆಗಾರರಿಗೆ ವಿಐಪಿ ರೀತಿಯಲ್ಲಿ ಪಾಸ್ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ನಾರಾಯಣಗೌಡ ಹೇಳಿದರು.
ತಾಲ್ಲೂಕಿನ ಕಾಚಿನಕಟ್ಟೆ ಗ್ರಾಮದ ಮಂಜುನಾಥ ಎಂಬ ರೇಷ್ಮೆ ಬೆಳಗಾರರ ರೇಷ್ಮೆ ತಾಕಿಗೆ ಭೇಟಿ ನೀಡಿ ಪರಿಶೀಲಿಸಿ, ರೇಷ್ಮೆ ಬೆಳೆಗಾರರ ಕುಂದು ಕೊರತೆಗಳನ್ನು ಆಲಿಸಿದ ನಂತರ ಅವರು ಮಾತನಾಡಿದರು.
READ | ಪಿಯುಸಿ ಪೂರ್ಣಗೊಳಿಸಿದವರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ, ಅರ್ಜಿ ಸಲ್ಲಿಕೆಗೆ ಇನ್ನೆರಡು ದಿನವಷ್ಟೇ ಬಾಕಿ
ರೇಷ್ಮೆ ಬೆಳೆಗಾರರು ತಮ್ಮ ಬೆಳೆಯನ್ನು ಗೂಡ್ಸ್ ಗಾಡಿಗಳ ಮೂಲಕ ರಾಮನಗರದಲ್ಲಿರುವ ಮಾರುಕಟ್ಟೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಪೊಲೀಸರು ಹಿಡಿದು ನಿಲ್ಲಿಸುತ್ತಾರೆ ಎಂದು ರೈತರು ಅಲವತ್ತುಕೊಂಡರು. ಅದಕ್ಕೆ ಸ್ಪಂದಿಸಿದ ಸಚಿವರು, ಇನ್ನು ಮುಂದೆ ರೈತರಿಗೆ ಹಾಗೆ ದಾರಿ ಮಧ್ಯೆ ತೊಂದರೆ ಕೊಡದಂತೆ ಪೊಲೀಸ್ ಇಲಾಖೆಗೆ ತಿಳಿಸಲಾಗುತ್ತದೆ ಎಂದು ಹೇಳಿದರು.
ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ
ಶಿವಮೊಗ್ಗದ ರೇಷ್ಮೆ ಬೆಳೆಗಾರರು ವರ್ಷಕ್ಕೆ 10 ರಿಂದ 11 ಬೆಳೆ ಬೆಳೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಇಂತಹ ಸಾಧನೆ ಮಾಡಿರುವ ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸಲು ಬಹುಮಾನ ನೀಡಿ ಗೌರವಿಸಲಾಗುವುದು ಎಂದರು
ಬೇರೆ ಕಡೆಗೆ ಹೋಲಿಸಿದರೆ ಶಿವಮೊಗ್ಗದಲ್ಲಿ ಉತ್ತಮ ರೀತಿಯಲ್ಲಿ ರೇಷ್ಮೆ ಇಳುವರಿ ಇದೆ. ಬೇರೆಡೆ ವರ್ಷಕ್ಕೆ 8 ಬೆಳೆ ಮೇಲೆ ಬೆಳೆದಿಲ್ಲ. ಆದರೆ, ಇಲ್ಲಿನ ರೈತರು 10 ರಿಂದ 11 ಬೆಳೆ ವಾರ್ಷಿಕವಾಗಿ ಬೆಳೆದು ಉತ್ತಮ ಸಾಧನೆ ಮಾಡಿದ್ದಾರೆಂದು ಶ್ಲಾಘಿಸಿದರು.
ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ರೇಷ್ಮೆಗೆ ಬೇಡಿಕೆ ಇರಲಿಲ್ಲ. ಹಾಗೂ ರೇಷ್ಮೆ ಚೀನಾದಿಂದ ಆಮದು ಆಗುತ್ತಿತ್ತು. ಈಗ ಚೀನಾ ಆಮದು ಬಂದ್ ಆದ ಹಿನ್ನೆಲೆಯಲ್ಲಿ ಸ್ಥಳೀಯ ರೇಷ್ಮೆಗೆ ಒಳ್ಳೆಯ ಬೇಡಿಕೆ ಇದೆ. ಪ್ರಸ್ತುತ ಉತ್ತಮ ದರ ಕೂಡ ಇರುವುದು ಸಂತಸದ ವಿಚಾರವಾಗಿದೆ ಎಂದರು.
https://www.suddikanaja.com/2021/03/24/good-response-to-silk-saree-sale-in-shivamogga/