ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್, ಅವರ ಬಳಿ ಸಿಕ್ಕ ಮಾದಕ ವಸ್ತು ಎಷ್ಟು?

 

 

ಸುದ್ದಿ ಕಣಜ.ಕಾಂ | TALUK | CRIME NEWS
ಶಿರಾಳಕೊಪ್ಪ: ತಡಗಣಿ ಗ್ರಾಮಕ್ಕೆ ಹೋಗುವ ಕ್ರಾಸ್ ಹತ್ತಿರ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ಅಂದಾಜು ₹17,000 ಮೌಲ್ಯದ ಒಟ್ಟು 460 ಗ್ರಾಂ ತೂಕದ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ 2 ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

READ | ಮಹಿಳೆಗೆ ಮತಾಂತರ ಮಾಡಲು ಯತ್ನಿಸಿದ ಇಬ್ಬರು ಅರೆಸ್ಟ್

ಖಚಿತ ಮಾಹಿತಿ ಮೇರೆಗೆ ದಾಳಿ
ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶಿರಾಳಕೊಪ್ಪ ಪೊಲೀಸ್ ಠಾಣೆ ಪಿಎಸ್ಐ ಹಾಗೂ ಸಿಬ್ಬಂದಿ ತಂಡವು ದಾಳಿ ನಡೆಸಿದೆ‌. ಆರೋಪಿಗಳ ವಿರುದ್ಧ ಕಲಂ 8(ಸಿ), 20(ಬಿ)(2), ಎನ್.ಡಿ.ಪಿ.ಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗುತ್ತಿದೆ.

error: Content is protected !!