ಶ್ರೀ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ, ಮಾಜಿ ಸಿಎಂ ಯಡಿಯೂರಪ್ಪ ಸಂತಾಪ

 

 

ಸುದ್ದಿ ಕಣಜ.ಕಾಂ | KARNATAKA | RELIGIOUS
ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಕುಪ್ಪೂರು ಗದ್ದುಗೆ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಶನಿವಾರ ಲಿಂಗೈಕ್ಯರಾಗಿದ್ದಾರೆ.
ಶ್ರೀಗಳಿಗೆ 47 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಏರುಪೇರಾಗಿ ಉಸಿರಾಟದ ತೊಂದರೆ ಮೃತಪಟ್ಟಿದ್ದಾರೆ. ಆರೋಗ್ಯ ಏರುಪೇರಾಗಿದ್ದಕ್ಕೆ ಇವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅಪಾರ ಭಕ್ತ ಸಮೂಹವನ್ನು ಇವರು ಅಗಲಿದ್ದಾರೆ.

Yatishwar swamijiಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶ್ರೀಗಳ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಮ್ಮ ಅಧಿಕೃತ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು ಸಂತಾಪ ಸೂಚಿಸಿದ್ದಾರೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಗದ್ದುಗೆ ಮಠದ ಶ್ರೀ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅನೇಕ ಸಮಾಜಮುಖಿ ಸೇವಾಕಾರ್ಯಗಳಿಂದ ಮನೆಮಾತಾಗಿದ್ದ ಶ್ರೀಗಳು, ನೀರಾವರಿ ಹೋರಾಟದಲ್ಲಿ ಮುಂದಾಳತ್ವ ವಹಿಸಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

https://www.suddikanaja.com/2021/07/21/malenadu-veerashaiva-mathadhishara-parishat-supported-bs-yadiyurappa/

error: Content is protected !!