ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಅಮೃತ ನೋನಿ ಹೆಸರಿನ ನಕಲಿ ಉತ್ಪನ್ನ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ದೂರಿನನ್ವಯ ದೊಡ್ಡಪೇಟೆ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿದ್ದಾರೆ.
ನಗರದ ಮಾರ್ನಮಿಬೈಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ಮಾಡಲಾಗಿದ್ದು, 31 ಬಾಕ್ಸ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅಮೃತ ನೋನಿ ಬ್ರ್ಯಾಂಡ್ ಹೆಸರಿನಲ್ಲಿಯೇ ನಕಲಿ ಜ್ಯೂಸ್ ಮಾರಾಟ ಮಾಡುತ್ತಿರುವುದಾಗಿ ಆರೋಪಿಸಲಾಗಿದೆ.
ಅಮೃತ ನೋನಿ ಹೆಸರಿನಲ್ಲಿ ನಕಲಿ ಜ್ಯೂಸ್ ಮಾರಾಟ ಮಾಡುತ್ತಿರುವ ಬಗ್ಗೆ ದೂರಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಿದ್ದು, ವರದಿ ಬಂದ ಬಳಿಕವಷ್ಟೇ ವಾಸ್ತವಾಂಶ ಗೊತ್ತಾಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.