ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಶುಂಠಿಯ ನಡುವೆ ಬೆಳೆಯಲಾಗಿದ್ದ ಗಾಂಜಾವನ್ನು ಪತ್ತೆ ಹಚ್ಚಿರುವ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಣ್ಣಕೊಪ್ಪ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ 1 ಕೆಜಿ 200 ಗ್ರಾಂ ಹಸಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.
ಆರೋಪಿಗಳು ಎಸ್ಕೇಪ್
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದಾರೆನ್ನಲಾದ ನಾಗರಾಜ್ ಮತ್ತು ಲಲಿತಮ್ಮ ದಂಪತಿ ನಾಪತ್ತೆಯಾಗಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.