ಸುದ್ದಿ ಕಣಜ.ಕಾಂ | KARNATAKA | JOB JUNCTION
ಶಿವಮೊಗ್ಗ: ಬೆಂಗಳೂರಿನ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಹುದ್ದೆಗಾಗಿ ಮಾಜಿ ಸೈನಿಕರಿಂದ (ಹವಾಲ್ದಾರ್ ಮತ್ತು ಅದಕ್ಕಿಂತ ಕೆಳಗಿನ ರ್ಯಾಂಕ್) ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನಾಂಕವಾಗಿದೆ. ಆಸಕ್ತರು ಶಿವಮೊಗ್ಗದ ಸೈನಿಕ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.