ಸುದ್ದಿ ಕಣಜ.ಕಾಂ | TALUK | CRIME NEWS
ತೀರ್ಥಹಳ್ಳಿ: ವ್ಯಕ್ತಿಯೊಬ್ಬರು ರಸ್ತೆಯಲ್ಲೇ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ತಾಲೂಕಿನ ಅಕ್ಲಾಪುರ ಗ್ರಾಮದ ರಾಘವೇಂದ್ರ(40) ಎಂಬುವವರೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ಆದರೆ, ಆಸ್ತಿ ವಿಚಾರದಲ್ಲಿನ ವ್ಯಾಜ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.
ಮನೆಯಿಂದಲೇ ತಂದಿದ್ದರು ಸೀಮೆ ಎಣ್ಣೆ
ರಾಘವೇಂದ್ರ ಅವರು ಮನೆಯಿಂದಲೇ ಸೀಮೆ ಎಣ್ಣೆ ತಂದಿದ್ದು, ದತ್ತರಾಜಪುರ ಮಾರ್ಗದಲ್ಲಿ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಸುಟ್ಟಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.