ಸುದ್ದಿ ಕಣಜ.ಕಾಂ | DISTRICT | DC VISIT TO VILLAGE
ಶಿವಮೊಗ್ಗ: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ’ ಎಂಬ ಹೊಸ ಪರಿಕಲ್ಪನೆ ಅಡಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.
READ | ಆಯುಧ ಪೂಜೆಗೆ ಶೃಂಗಾರಗೊಂಡ ಸಿಗಂದೂರು ಲಾಂಚ್, ಶರಾವತಿ ಹಿನ್ನೀರಿಗೆ ಲಾಂಚ್ ಶುರುವಾದ ರೋಚಕ ಇತಿಹಾಸ ಇಲ್ಲಿದೆ
ಈ ಪರಿಕಲ್ಪನೆಯ ಅಂಗವಾಗಿ ಅಕ್ಟೋಬರ್ 16ರಂದು ಬೆಳಗ್ಗೆ 11 ಗಂಟೆಗೆ ತಾಲೂಕಿನ ನಿದಿಗೆ 2ನೇ ಹೋಬಳಿ ಗಾಜನೂರು ಗ್ರಾಮದ ಶ್ರೀ ತುಂಗಾ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಎಲ್ಲ ಅಧಿಕಾರಿ/ಸಿಬ್ಬಂದಿಯೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಬಳಿಕ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಕ್ರಮ ಕೈಗೊಳ್ಳಲಿದ್ದಾರೆ. ಡಿಸಿ ಅವರು ಅಂದು ಹಳ್ಳಿಯಲ್ಲಶ ವಾಸ್ತವ್ಯ ಹೂಡಲಿದ್ದಾರೆ.
ಆದ್ದರಿಂದ ಗಾಜನೂರು ಗ್ರಾಮಸ್ಥರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, 16ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.