ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಾಡೆಲ್ ಸಬ್ ಡಿವಿಜನ್ ಯೋಜನೆ ಅಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ಅಕ್ಟೋಬರ್ 20ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಶಿವಮೂರ್ತಿ ಸರ್ಕಲ್, ಜಯನಗರ, ಬಸವನಗುಡಿ, ಆರ್.ಎಂ.ಆರ್.ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
22ರಂದು ಪವರ್ ಕಟ್
ಸಂತೇಕಡೂರು ವಿದ್ಯುತ್ ವಿತರಣೆ ಕೇಂದ್ರದ ಎಫ್-1 ಉಂಬ್ಳೇಬೈಲು ಮತ್ತು ಎಫ್-2 ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 22ರಂದು ಬೆಳಗ್ಗೆ 10ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಪೂರೈಕೆ ಆಗುವುದಿಲ್ಲ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ಕೋರಿದೆ.