ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಉತ್ತಾರಖಂಡ ರಾಜ್ಯದ ಡೆಹರಾಡೂನಿನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಇಲ್ಲಿ ಜುಲೈ 2022 ನೇ ಸಾಲಿನ ಅಧಿವೇಶನಕ್ಕಾಗಿ 8ನೇ ತರಗತಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 15 ಕಡೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ 080-25589459, ಶಿವಮೊಗ್ಗ ಕಚೇರಿ ಸಂಖ್ಯೆ 08182-220925, ವೆಬ್ಸೈಟ್ www.rimc.gov.in ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು(ಪ್ರಭಾರ) ತಿಳಿಸಿದ್ದಾರೆ.